Genesis · chapter 49 · verse 19
Genesis 49:19 in Kannada
ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
Sainyada gumpu gaadana mele baruvadu, aadare konege avanu jayisuvanu.
Genesis 49:19 in English
- King James Version (KJV)
- Gad, a troop shall overcome him: but he shall overcome at the last.
- World English Bible (WEB)
- “A troop will press on Gad, but he will press on their heel.
- American Standard Version (ASV)
- Gad, a troop shall press upon him; But he shall press upon their heel.
- Bible in Basic English (BBE)
- Gad, an army will come against him, but he will come down on them in their flight.
- Darby Translation (DBY)
- Gad — troops will rush upon him; But he will rush upon the heel.
- Webster's Bible (WBS)
- Gad, a troop shall overcome him: but he shall overcome at the last.
- Young's Literal Translation (YLT)
- Gad! a troop assaulteth him, But he assaulteth last.
Read in context
- 17ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- 18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- 19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- 20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- 21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
Cross references
- 1 Chronicles 5:11–22 1 ಪೂರ್ವಕಾಲವೃತ್ತಾಂತ 5:11–22ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು. ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು. ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು. ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು. ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು. ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು. ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು. ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು. ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ. ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
- Deuteronomy 33:20–21 ಧರ್ಮೋಪದೇಶಕಾಂಡ 33:20–21ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ. ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
- Genesis 30:11 ಆದಿಕಾಂಡ 30:11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 1 Chronicles 3:18–22 1 ಪೂರ್ವಕಾಲವೃತ್ತಾಂತ 3:18–22ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು. ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು. ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು. ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
- Judges 10:1–11 ನ್ಯಾಯಸ್ಥಾಪಕರು 10:1–11ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು. ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು. ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು. ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ. ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು. ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು. ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು. ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು. ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು. ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
- Joshua 13:8 ಯೆಹೋಶುವ 13:8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
- Numbers 32:1–42 ಅರಣ್ಯಕಾಂಡ 32:1–42ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು. ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು. ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ? ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ? ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು. ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು. ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ. ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು. ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು. ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ. ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು. ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Genesis 46:16 ಆದಿಕಾಂಡ 46:16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.