Genesis · chapter 49 · verse 22
Genesis 49:22 in Kannada
ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
Yosephanu phalabharitavaada kombe. Baaviya baliyalliruva phalabharitavaada kombe. Adara kavalugalu godeyannu daatuttave.
Genesis 49:22 in English
- King James Version (KJV)
- Joseph [is] a fruitful bough, [even] a fruitful bough by a well; [whose] branches run over the wall:
- World English Bible (WEB)
- “Joseph is a fruitful vine, a fruitful vine by a spring. His branches run over the wall.
- American Standard Version (ASV)
- Joseph is a fruitful bough, A fruitful bough by a fountain; His branches run over the wall.
- Bible in Basic English (BBE)
- Joseph is a young ox, whose steps are turned to the fountain;
- Darby Translation (DBY)
- Joseph is a fruitful bough; A fruitful bough by a well; [His] branches shoot over the wall.
- Webster's Bible (WBS)
- Joseph [is] a fruitful bough, [even] a fruitful bough by a well; [whose] branches run over the wall:
- Young's Literal Translation (YLT)
- Joseph [is] a fruitful son; A fruitful son by a fountain, Daughters step over the wall;
Read in context
- 20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- 21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
- 22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
- 23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
- 24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
Cross references
- Genesis 41:52 ಆದಿಕಾಂಡ 41:52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
- Psalm 1:1–3 ಕೀರ್ತನೆಗಳು 1:1–3ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು. ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Psalm 128:3 ಕೀರ್ತನೆಗಳು 128:3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- Genesis 46:27 ಆದಿಕಾಂಡ 46:27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- Genesis 30:22–24 ಆದಿಕಾಂಡ 30:22–24ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು. ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು. ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- Joshua 16:1–10 ಯೆಹೋಶುವ 16:1–10ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು. ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು. ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು. ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ. ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ. ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- Joshua 17:14–17 ಯೆಹೋಶುವ 17:14–17ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು. ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು. ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು. ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Genesis 48:19–20 ಆದಿಕಾಂಡ 48:19–20ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Psalm 128:1 ಕೀರ್ತನೆಗಳು 128:1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- Ezekiel 19:11 ಯೆಹೆಜ್ಕೇಲನು 19:11ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.