Genesis · chapter 49 · verse 25
Genesis 49:25 in Kannada
ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
Andare ninage sahaayamaaduva ninna tandeya devarinda, meliruva paralokada aasheervaadagalondigoo kelagiruva agaadhada aasheervaadagalondigoo molegala mattu garbhada aasheervaadagalondigoo ninnannu aasheervadisuva sarvashaktaninda balishthanaagi maadalpattive. (allinda aatanu israayelana kurubanoo bandeyoo aagiddaane.)
Genesis 49:25 in English
- King James Version (KJV)
- [Even] by the God of thy father, who shall help thee; and by the Almighty, who shall bless thee with blessings of heaven above, blessings of the deep that lieth under, blessings of the breasts, and of the womb:
- World English Bible (WEB)
- even by the God of your father, who will help you, by the Almighty, who will bless you, with blessings of heaven above, blessings of the deep that lies below, blessings of the breasts, and of the womb.
- American Standard Version (ASV)
- Even by the God of thy father, who shall help thee, And by the Almighty, who shall bless thee, With blessings of heaven above, Blessings of the deep that coucheth beneath, Blessings of the breasts, and of the womb.
- Bible in Basic English (BBE)
- Even by the God of your father, who will be your help, and by the Ruler of all, who will make you full with blessings from heaven on high, blessings of the deep stretched out under the earth, blessings of the breasts and of the fertile body:
- Darby Translation (DBY)
- From the God of thy father, and he will help thee; And from the Almighty, and he will bless thee — With blessings of heaven from above, With blessings of the deep that lieth under, With blessings of the breast and of the womb.
- Webster's Bible (WBS)
- [Even] by the God of thy father, who shall help thee, and by the Almighty, who shall bless thee with blessings of heaven above, blessings of the deep that lieth beneath, blessings of the breasts, and of the womb:
- Young's Literal Translation (YLT)
- By the God of thy father who helpeth thee, And the Mighty One who blesseth thee, Blessings of the heavens from above, Blessings of the deep lying under, Blessings of breasts and womb; —
Read in context
- 23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
- 24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
- 25ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
- 26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- 27ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
Cross references
- Genesis 35:11 ಆದಿಕಾಂಡ 35:11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Genesis 43:23 ಆದಿಕಾಂಡ 43:23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
- Deuteronomy 28:2–12 ಧರ್ಮೋಪದೇಶಕಾಂಡ 28:2–12ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Deuteronomy 33:13–17 ಧರ್ಮೋಪದೇಶಕಾಂಡ 33:13–17ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ. ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Deuteronomy 8:17 ಧರ್ಮೋಪದೇಶಕಾಂಡ 8:17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Genesis 27:28 ಆದಿಕಾಂಡ 27:28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- Genesis 35:3 ಆದಿಕಾಂಡ 35:3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
- Genesis 28:21 ಆದಿಕಾಂಡ 28:21ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Original words (Hebrew)
- God · H410אֵל ʼêl
- father · H1אָב ʼâb
- help · H5826עָזַר ʻâzar
- by · H854אֵת ʼêth
- Almighty · H7706שַׁדַּי Shadday
- bless · H1288בָרַךְ bârak
- blessings · H1293בְּרָכָה Bᵉrâkâh
- heaven · H8064שָׁמַיִם shâmayim
- above · H5920עַל ʻal
- blessings · H1293בְּרָכָה Bᵉrâkâh
- deep · H8415תְּהוֹם tᵉhôwm
- lieth · H7257רָבַץ râbats
- blessings · H1293בְּרָכָה Bᵉrâkâh
- breasts · H7699שַׁד shad
- womb · H7356רַחַם racham