Genesis · chapter 49 · verse 29
Genesis 49:29 in Kannada
ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
Avanu avarige aajnyaapisi heliddenandare--naanu nanna janarondige koodisalpa duttene. Nanna tandegala sangada hittiyanaada ephronina holadalliruva gaviyalli
Genesis 49:29 in English
- King James Version (KJV)
- And he charged them, and said unto them, I am to be gathered unto my people: bury me with my fathers in the cave that [is] in the field of Ephron the Hittite,
- World English Bible (WEB)
- He instructed them, and said to them, “I am to be gathered to my people. Bury me with my fathers in the cave that is in the field of Ephron the Hittite,
- American Standard Version (ASV)
- And he charged them, and said unto them, I am to be gathered unto my people: bury me with my fathers in the cave that is in the field of Ephron the Hittite,
- Bible in Basic English (BBE)
- And he gave orders to them, saying, Put me to rest with my people and with my fathers, in the hollow of the rock in the field of Ephron the Hittite,
- Darby Translation (DBY)
- And he charged them, and said to them, I am gathered to my people: bury me with my fathers in the cave that is in the field of Ephron the Hittite,
- Webster's Bible (WBS)
- And he charged them, and said to them, I am to be gathered to my people: bury me with my fathers in the cave that [is] in the field of Ephron the Hittite.
- Young's Literal Translation (YLT)
- And he commandeth them, and saith unto them, 'I am being gathered unto my people; bury me by my fathers, at the cave which [is] in the field of Ephron the Hittite;
Read in context
- 27ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
- 28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
- 29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
- 30ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
- 31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
Cross references
- Genesis 47:30 ಆದಿಕಾಂಡ 47:30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- Genesis 25:8–17 ಆದಿಕಾಂಡ 25:8–17ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು. ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು. ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು. ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು. ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ ಮಿಷ್ಮಾ ದೂಮಾ ಮಸ್ಸಾ ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- 2 Samuel 19:37 2 ಸಮುವೇಲನು 19:37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
- Romans 12:6–21 ರೋಮಾಪುರದವರಿಗೆ 12:6–21ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ. ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ. ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ. ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ. ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ. ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ. ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ. ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Hebrews 12:23 ಇಬ್ರಿಯರಿಗೆ 12:23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ