Genesis · chapter 49 · verse 4
Genesis 49:4 in Kannada
ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
Neeri nante chanchalanaagiddu neenu shreshthanaaguvadilla. Yaakandare ninna tandeya manchavanneri hole maadidi; nanna haasigeyannu eridi;
Genesis 49:4 in English
- King James Version (KJV)
- Unstable as water, thou shalt not excel; because thou wentest up to thy father’s bed; then defiledst thou [it:] he went up to my couch.
- World English Bible (WEB)
- Boiling over like water, you shall not excel, because you went up to your father’s bed, then defiled it. He went up to my couch.
- American Standard Version (ASV)
- Boiling over as water, thou shalt not have the pre-eminence; Because thou wentest up to thy father’s bed; Then defiledst thou it: he went up to my couch.
- Bible in Basic English (BBE)
- But because you were uncontrolled, the first place will not be yours; for you went up to your father's bed, even his bride-bed, and made it unclean.
- Darby Translation (DBY)
- Impetuous as the waters, thou shalt have no pre-eminence; Because thou wentest up to thy father's couch: Then defiledst thou [it]: he went up to my bed.
- Webster's Bible (WBS)
- Unstable as water, thou shalt not excel; because thou wentest up to thy father's bed; then defiledst thou [it]; he went up to my couch.
- Young's Literal Translation (YLT)
- Unstable as water, thou art not abundant; For thou hast gone up thy father's bed; Then thou hast polluted: My couch he went up!
Read in context
- 2ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
- 3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- 4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- 5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
- 6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
Cross references
- Genesis 35:22 ಆದಿಕಾಂಡ 35:22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- 1 Chronicles 5:1 1 ಪೂರ್ವಕಾಲವೃತ್ತಾಂತ 5:1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- Deuteronomy 27:20 ಧರ್ಮೋಪದೇಶಕಾಂಡ 27:20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Deuteronomy 33:6 ಧರ್ಮೋಪದೇಶಕಾಂಡ 33:6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- James 1:6–8 ಯಾಕೋಬನು 1:6–8ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- Genesis 46:8 ಆದಿಕಾಂಡ 46:8ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
- Deuteronomy 5:21 ಧರ್ಮೋಪದೇಶಕಾಂಡ 5:21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- 2 Peter 2:14 2 ಪೇತ್ರನು 2:14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- Numbers 32:1–42 ಅರಣ್ಯಕಾಂಡ 32:1–42ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು. ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು. ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ? ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ? ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು. ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು. ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ. ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು. ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು. ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ. ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು. ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.