Genesis · chapter 49 · verse 7
Genesis 49:7 in Kannada
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
Avara kopavu bhayankaravaagiyoo avara raudravu krooravaagiyoo ide; avu shapisalpaduvavu. Yaakobinalli avarannu vibhaagisi israayelinalli avarannu chadarisibiduvenu.
Genesis 49:7 in English
- King James Version (KJV)
- Cursed [be] their anger, for [it was] fierce; and their wrath, for it was cruel: I will divide them in Jacob, and scatter them in Israel.
- World English Bible (WEB)
- Cursed be their anger, for it was fierce; and their wrath, for it was cruel. I will divide them in Jacob, and scatter them in Israel.
- American Standard Version (ASV)
- Cursed be their anger, for it was fierce; And their wrath, for it was cruel: I will divide them in Jacob, And scatter them in Israel.
- Bible in Basic English (BBE)
- A curse on their passion for it was bitter; and on their wrath for it was cruel. I will let their heritage in Jacob be broken up, driving them from their places in Israel.
- Darby Translation (DBY)
- Cursed be their anger, for it [was] violent; And their rage, for it [was] cruel! I will divide them in Jacob, And scatter them in Israel.
- Webster's Bible (WBS)
- Cursed [be] their anger, for [it was] fierce: and their wrath, for it was cruel: I will divide them in Jacob, and scatter them in Israel.
- Young's Literal Translation (YLT)
- Cursed [is] their anger, for [it is] fierce, And their wrath, for [it is] sharp; I divide them in Jacob, And I scatter them in Israel.
Read in context
- 5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
- 6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
- 7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- 8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
- 9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
Cross references
- Joshua 19:1–9 ಯೆಹೋಶುವ 19:1–9ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು. ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ, ಹಚರ್ಷೂವಾಲ್, ಬಾಲಾ, ಎಚೆಮ್, ಎಲ್ತೋಲದ್, ಬೆತೂಲ್, ಹೋರ್ಮಾ, ಚಿಕ್ಲಗ್, ಬೇರ್ತ್ಮ್ಕಾಬೋತ್, ಹಚರ್ಸೂಸಾ, ಭೇತ್ಲೆ ಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳು ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು; ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು. ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
- 1 Chronicles 4:24–31 1 ಪೂರ್ವಕಾಲವೃತ್ತಾಂತ 4:24–31ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು. ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು. ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ. ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ. ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ ಹಚರ್ ಷೂವಾಲ್ತ್ನಲ್ಲಿಯೂ ಬಿಲ್ಹದಲ್ಲಿಯೂ ಏಚೆಮನ ಲ್ಲಿಯೂ ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ ಚಿಕ್ಲಗಿನಲ್ಲಿಯೂ ಬೇತ್ಮರ್ಕಾಬೋತ್ದಲ್ಲಿಯೂ ಹಚರ್ ಸೂಸೀಮ ದಲ್ಲಿಯೂ ಬೇತ್ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು.
- 1 Chronicles 6:65 1 ಪೂರ್ವಕಾಲವೃತ್ತಾಂತ 6:65ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
- 2 Samuel 13:15 2 ಸಮುವೇಲನು 13:15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
- Proverbs 26:24–25 ಜ್ಞಾನೋಕ್ತಿಗಳು 26:24–25ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
- Proverbs 27:3 ಜ್ಞಾನೋಕ್ತಿಗಳು 27:3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- 1 Chronicles 4:39–40 1 ಪೂರ್ವಕಾಲವೃತ್ತಾಂತ 4:39–40ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು. ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
- 2 Samuel 13:22–28 2 ಸಮುವೇಲನು 13:22–28ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು. ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು. ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು. ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು. ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Joshua 21:1–45 ಯೆಹೋಶುವ 21:1–45ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ-- ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು. ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ-- ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು. ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು. ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.