Genesis · chapter 5 · verse 3
Genesis 5:3 in Kannada
ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
Aadaamanige nooramoovattu varushavaadaaga roopadalli tanna holikege sariyaada maganannu padedu avanige setanendu hesarittanu.
Genesis 5:3 in English
- King James Version (KJV)
- And Adam lived an hundred and thirty years, and begat [a son] in his own likeness, after his image; and called his name Seth:
- World English Bible (WEB)
- Adam lived one hundred thirty years, and became the father of a son in his own likeness, after his image, and named him Seth.
- American Standard Version (ASV)
- And Adam lived a hundred and thirty years, and begat [a son] in his own likeness, after his image; and called his name Seth:
- Bible in Basic English (BBE)
- Adam had been living for a hundred and thirty years when he had a son like himself, after his image, and gave him the name of Seth:
- Darby Translation (DBY)
- And Adam lived a hundred and thirty years, and begot [a son] in his likeness, after his image, and called his name Seth.
- Webster's Bible (WBS)
- And Adam lived a hundred and thirty years, and begat [a son] in his own likeness, after his image; and called his name Seth:
- Young's Literal Translation (YLT)
- And Adam liveth an hundred and thirty years, and begetteth [a son] in his likeness, according to his image, and calleth his name Seth.
Read in context
- 1ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
- 2ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- 3ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
- 4ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 5ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
Cross references
- Genesis 4:25 ಆದಿಕಾಂಡ 4:25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- Psalm 14:2–3 ಕೀರ್ತನೆಗಳು 14:2–3ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Job 15:14–16 ಯೋಬನು 15:14–16ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು? ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ. ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- 1 Corinthians 15:39 1 ಕೊರಿಂಥದವರಿಗೆ 15:39ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ.
- Ephesians 2:3 ಎಫೆಸದವರಿಗೆ 2:3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- Job 25:4 ಯೋಬನು 25:4ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
- Psalm 51:5 ಕೀರ್ತನೆಗಳು 51:5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.