Genesis · chapter 50 · verse 19
Genesis 50:19 in Kannada
ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
Yosephanu avarige bhaya padabediri, naanu devara sthaanadalli iddeno?
Genesis 50:19 in English
- King James Version (KJV)
- And Joseph said unto them, Fear not: for [am] I in the place of God?
- World English Bible (WEB)
- Joseph said to them, “Don’t be afraid, for am I in the place of God?
- American Standard Version (ASV)
- And Joseph said unto them, Fear not: for am I in the place of God?
- Bible in Basic English (BBE)
- And Joseph said, Have no fear: am I in the place of God?
- Darby Translation (DBY)
- And Joseph said to them, Fear not: am I then in the place of God?
- Webster's Bible (WBS)
- And Joseph said to them, Fear not: for [am] I in the place of God?
- Young's Literal Translation (YLT)
- And Joseph saith unto them, 'Fear not, for [am] I in the place of God?
Read in context
- 17ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
- 18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
- 19ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
- 20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- 21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
Cross references
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Genesis 45:5 ಆದಿಕಾಂಡ 45:5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- Matthew 14:27 ಮತ್ತಾಯನು 14:27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Job 34:19–29 ಯೋಬನು 34:19–29ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ. ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ. ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ. ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ. ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ. ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ. ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.