Genesis · chapter 6 · verse 5
Genesis 6:5 in Kannada
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
Manushyana dushtatvavu bhoomiyalli hechchiddannoo avana hrudayada aalochanegala kalpanegalellaa yaavaagaloo baree kettavugalendoo devaru nodidanu.
Genesis 6:5 in English
- King James Version (KJV)
- And GOD saw that the wickedness of man [was] great in the earth, and [that] every imagination of the thoughts of his heart [was] only evil continually.
- World English Bible (WEB)
- The LORD saw that the wickedness of man was great on the earth, and that every imagination of the thoughts of man’s heart was continually only evil.
- American Standard Version (ASV)
- And Jehovah saw that the wickedness of man was great in the earth, and that every imagination of the thoughts of his heart was only evil continually.
- Bible in Basic English (BBE)
- And the Lord saw that the sin of man was great on the earth, and that all the thoughts of his heart were evil.
- Darby Translation (DBY)
- And Jehovah saw that the wickedness of Man was great on the earth, and every imagination of the thoughts of his heart only evil continually.
- Webster's Bible (WBS)
- And God saw that the wickedness of man [was] great in the earth, and [that] every imagination of the thoughts of his heart [was] only evil continually.
- Young's Literal Translation (YLT)
- And Jehovah seeth that abundant [is] the wickedness of man in the earth, and every imagination of the thoughts of his heart only evil all the day;
Read in context
- 3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- 4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
- 5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- 6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
- 7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
Cross references
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Romans 1:28–31 ರೋಮಾಪುರದವರಿಗೆ 1:28–31ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Mark 7:21–23 ಮಾರ್ಕನು 7:21–23ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Ephesians 2:1–3 ಎಫೆಸದವರಿಗೆ 2:1–3ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Psalm 53:2 ಕೀರ್ತನೆಗಳು 53:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Psalm 14:1–4 ಕೀರ್ತನೆಗಳು 14:1–4ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?