Genesis · chapter 7 · verse 2
Genesis 7:2 in Kannada
ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
Shuddhavaada ellaa praanigalalli gandu hennaagiruva eleloo ashuddha praanigalalli gandu hennu eraderadaranteyoo ninna balige tegeduko.
Genesis 7:2 in English
- King James Version (KJV)
- Of every clean beast thou shalt take to thee by sevens, the male and his female: and of beasts that [are] not clean by two, the male and his female.
- World English Bible (WEB)
- You shall take seven pairs of every clean animal with you, the male and his female. Of the animals that are not clean, take two, the male and his female.
- American Standard Version (ASV)
- Of every clean beast thou shalt take to thee seven and seven, the male and his female; and of the beasts that are not clean two, the male and his female:
- Bible in Basic English (BBE)
- Of every clean beast you will take seven males and seven females, and of the beasts which are not clean, two, the male and his female;
- Darby Translation (DBY)
- Of all clean beasts thou shalt take to thee by sevens, a male and its female; but of the beasts that are not clean two, a male and its female.
- Webster's Bible (WBS)
- Of every clean beast thou shalt take to thee by sevens, the male and his female: and of beasts that [are] not clean by two, the male and his female.
- Young's Literal Translation (YLT)
- of all the clean beasts thou dost take to thee seven pairs, a male and its female; and of the beasts which are not clean two, a male and its female;
Read in context
- 1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- 2ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
- 3ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.
- 4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
Cross references
- Leviticus 10:10 ಯಾಜಕಕಾಂಡ 10:10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Leviticus 11:1–47 ಯಾಜಕಕಾಂಡ 11:1–47ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ: ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು. ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ. ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು. ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು. ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ. ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು. ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು. ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ, ರಣಹದ್ದು, ಅದರ ಜಾತಿಯ ಹದ್ದು; ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ, ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ, ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ; ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು, ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ. ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು. ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು. ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು. ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು. ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು. ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ, ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು. ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು. ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು. ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು. ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು. ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು. ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು. ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು. ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು. ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು. ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು. ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ. ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು. ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ. ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Acts 10:11–15 ಅಪೊಸ್ತಲರ ಕೃತ್ಯಗಳು 10:11–15ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- Genesis 7:8 ಆದಿಕಾಂಡ 7:8ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Genesis 6:19–21 ಆದಿಕಾಂಡ 6:19–21ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು. ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು. ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
- Deuteronomy 14:1–21 ಧರ್ಮೋಪದೇಶಕಾಂಡ 14:1–21ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ. ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ. ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: ಎತ್ತು, ಕುರಿ, ಮೇಕೆ, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ. ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು. ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ, ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು ಜಾತ್ಯಾನುಸಾರವಾದ ಸಕಲ ಕಾಗೆಯೂ ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ. ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.