Genesis · chapter 8 · verse 16
Genesis 8:16 in Kannada
ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
Neenoo ninna sangada ninna hendatiyoo ninna kumaararoo avara hendati yaroo naaveyolaginda horage hogiri.
Genesis 8:16 in English
- King James Version (KJV)
- Go forth of the ark, thou, and thy wife, and thy sons, and thy sons’ wives with thee.
- World English Bible (WEB)
- “Go out of the ship, you, your wife, your sons, and your sons’ wives with you.
- American Standard Version (ASV)
- Go forth from the ark, thou, and thy wife, and thy sons, and thy sons’ wives with thee.
- Bible in Basic English (BBE)
- Go out of the ark, you and your wife and your sons and your sons' wives.
- Darby Translation (DBY)
- Go out of the ark, thou, and thy wife, and thy sons, and thy sons' wives with thee.
- Webster's Bible (WBS)
- Go forth from the ark, thou, and thy wife, and thy sons, and thy sons' wives with thee.
- Young's Literal Translation (YLT)
- every living thing that [is] with thee, of all flesh, among fowl, and among cattle, and among every creeping thing which is creeping on the earth, bring out with thee;
Read in context
- 14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
- 15ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 16ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
- 17ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
- 18ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.
Cross references
- Genesis 7:13 ಆದಿಕಾಂಡ 7:13ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Zechariah 9:11 ಜೆಕರ್ಯ 9:11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- Acts 16:37–39 ಅಪೊಸ್ತಲರ ಕೃತ್ಯಗಳು 16:37–39ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು. ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Joshua 4:10 ಯೆಹೋಶುವ 4:10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
- Joshua 4:16–18 ಯೆಹೋಶುವ 4:16–18ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು. ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು. ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
- Daniel 9:25–26 ದಾನಿಯೇಲನು 9:25–26ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Genesis 7:7 ಆದಿಕಾಂಡ 7:7ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
- Psalm 91:11 ಕೀರ್ತನೆಗಳು 91:11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- Joshua 3:17 ಯೆಹೋಶುವ 3:17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Acts 16:27–28 ಅಪೊಸ್ತಲರ ಕೃತ್ಯಗಳು 16:27–28ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು. ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.