Genesis · chapter 8 · verse 20
Genesis 8:20 in Kannada
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
Nohanu kartanige balipeethavannu katti shuddhavaada ellaa pashu pakshigalindaloo (kelavannu) tegedu balipeethada mele dahanabaligalannu arpisidanu.
Genesis 8:20 in English
- King James Version (KJV)
- And Noah builded an altar unto the LORD; and took of every clean beast, and of every clean fowl, and offered burnt offerings on the altar.
- World English Bible (WEB)
- Noah built an altar to the LORD, and took of every clean animal, and of every clean bird, and offered burnt offerings on the altar.
- American Standard Version (ASV)
- And Noah builded an altar unto Jehovah, and took of every clean beast, and of every clean bird, and offered burnt-offerings on the altar.
- Bible in Basic English (BBE)
- And Noah made an altar to the Lord, and from every clean beast and bird he made burned offerings on the altar.
- Darby Translation (DBY)
- And Noah built an altar to Jehovah; and took of every clean animal, and of all clean fowl, and offered up burnt-offerings on the altar.
- Webster's Bible (WBS)
- And Noah built an altar to the LORD, and took of every clean beast, and of every clean fowl, and offered burnt-offerings on the altar.
- Young's Literal Translation (YLT)
- And Noah buildeth an altar to Jehovah, and taketh of every clean beast, and of every clean fowl, and causeth burnt-offerings to ascend on the altar;
Read in context
- 18ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.
- 19ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
- 20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- 21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- 22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
Cross references
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Genesis 22:9 ಆದಿಕಾಂಡ 22:9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
- Genesis 12:7–8 ಆದಿಕಾಂಡ 12:7–8ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು. ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Leviticus 11:1–47 ಯಾಜಕಕಾಂಡ 11:1–47ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ: ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು. ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ. ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು. ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು. ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ. ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು. ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು. ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ, ರಣಹದ್ದು, ಅದರ ಜಾತಿಯ ಹದ್ದು; ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ, ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ, ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ; ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು, ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ. ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು. ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು. ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು. ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು. ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು. ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ, ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು. ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು. ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು. ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು. ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು. ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು. ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು. ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು. ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು. ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು. ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು. ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ. ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು. ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ. ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Genesis 35:7 ಆದಿಕಾಂಡ 35:7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
- Exodus 24:4–8 ವಿಮೋಚನಕಾಂಡ 24:4–8ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು. ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Genesis 35:1 ಆದಿಕಾಂಡ 35:1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
- Genesis 13:4 ಆದಿಕಾಂಡ 13:4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Hebrews 13:10 ಇಬ್ರಿಯರಿಗೆ 13:10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.