Genesis · chapter 9 · verse 15
Genesis 9:15 in Kannada
ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
Aaga naanu nanagoo nimagoo dehagaliruva ellaa jeevajantugaligoo madhye iruva nanna odambadikeyannu jnyaapakamaadikolluvenu. Innu shareeragalannellaa naashamaaduva jalapralayavaa guvade illa.
Genesis 9:15 in English
- King James Version (KJV)
- And I will remember my covenant, which [is] between me and you and every living creature of all flesh; and the waters shall no more become a flood to destroy all flesh.
- World English Bible (WEB)
- I will remember my covenant, which is between me and you and every living creature of all flesh, and the waters will no more become a flood to destroy all flesh.
- American Standard Version (ASV)
- and I will remember my covenant, which is between me and you and every living creature of all flesh; and the waters shall no more become a flood to destroy all flesh.
- Bible in Basic English (BBE)
- And I will keep in mind the agreement between me and you and every living thing; and never again will there be a great flow of waters causing destruction to all flesh.
- Darby Translation (DBY)
- and I will remember my covenant which is between me and you and every living soul of all flesh; and the waters shall not henceforth become a flood to destroy all flesh.
- Webster's Bible (WBS)
- And I will remember my covenant, which [is] between me and you and every living creature of all flesh; and the waters shall no more become a flood to destroy all flesh.
- Young's Literal Translation (YLT)
- and I have remembered My covenant which is between Me and you, and every living creature among all flesh, and the waters become no more a deluge to destroy all flesh;
Read in context
- 13ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
- 14ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
- 15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
- 16ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
- 17ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
Cross references
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- Isaiah 54:8–10 ಯೆಶಾಯ 54:8–10ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Ezekiel 16:60 ಯೆಹೆಜ್ಕೇಲನು 16:60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
- Exodus 28:12 ವಿಮೋಚನಕಾಂಡ 28:12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
- Leviticus 26:42–45 ಯಾಜಕಕಾಂಡ 26:42–45ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- 1 Kings 8:23 1 ಅರಸುಗಳು 8:23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Jeremiah 14:21 ಯೆರೆಮೀಯ 14:21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.