Habakkuk · chapter 1 · verse 3
Habakkuk 1:3 in Kannada
ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
Yaake nanage aparaadhavannu torisi kashtavannu nodamaaduttee? Sooreyoo hinseyoo nanna munde ave; jagalavannoo tarkavannoo ebbisuvavaru iddaare.
Habakkuk 1:3 in English
- King James Version (KJV)
- Why dost thou shew me iniquity, and cause [me] to behold grievance? for spoiling and violence [are] before me: and there are [that] raise up strife and contention.
- World English Bible (WEB)
- Why do you show me iniquity, and look at perversity? For destruction and violence are before me. There is strife, and contention rises up.
- American Standard Version (ASV)
- Why dost thou show me iniquity, and look upon perverseness? for destruction and violence are before me; and there is strife, and contention riseth up.
- Bible in Basic English (BBE)
- Why do you make me see evil-doing, and why are my eyes fixed on wrong? for wasting and violent acts are before me: and there is fighting and bitter argument.
- Darby Translation (DBY)
- Why dost thou cause me to see iniquity, and lookest thou upon grievance? For spoiling and violence are before me; and there is strife, and contention riseth up.
- Webster's Bible (WBS)
- Why dost thou show me iniquity, and cause [me] to behold grievance? for devastation and violence [are] before me: and there are [that] raise strife and contention.
- Young's Literal Translation (YLT)
- Why dost Thou shew me iniquity, And perversity dost cause to behold? And spoiling and violence [are] before me, And there is strife, and contention doth lift [itself] up,
Read in context
- 1ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.
- 2ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
- 3ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
- 4ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
- 5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
Cross references
- Psalm 55:9–11 ಕೀರ್ತನೆಗಳು 55:9–11ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
- Micah 7:1–4 ಮೀಕ 7:1–4ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ. ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
- Jeremiah 20:8 ಯೆರೆಮೀಯ 20:8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
- Jeremiah 9:2–6 ಯೆರೆಮೀಯ 9:2–6ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Psalm 73:3–9 ಕೀರ್ತನೆಗಳು 73:3–9ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- Psalm 120:5–6 ಕೀರ್ತನೆಗಳು 120:5–6ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ! ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- 2 Peter 2:8 2 ಪೇತ್ರನು 2:8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Psalm 12:1–2 ಕೀರ್ತನೆಗಳು 12:1–2ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ. ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.