Habakkuk · chapter 1 · verse 5
Habakkuk 1:5 in Kannada
ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
Anyajanaangagalalli nodi lakshyagottu bahala vaagi aashcharyapadiri; tilisidaroo neevu nambadantha kriyeyannu nimma divasagalalli naanu maaduttene.
Habakkuk 1:5 in English
- King James Version (KJV)
- Behold ye among the heathen, and regard, and wonder marvellously: for [I] will work a work in your days, [which] ye will not believe, though it be told [you].
- World English Bible (WEB)
- “Look among the nations, watch, and wonder marvelously; for I am working a work in your days which you will not believe though it is told you.
- American Standard Version (ASV)
- Behold ye among the nations, and look, and wonder marvellously; for I am working a work in your days, which ye will not believe though it be told you.
- Bible in Basic English (BBE)
- See among the nations, and take note, and be full of wonder: for in your days I am doing a work in which you will have no belief, even if news of it is given to you.
- Darby Translation (DBY)
- See ye among the nations, and behold, and wonder marvellously; for [I] work a work in your days, which ye will not believe, though it be declared [to you].
- Webster's Bible (WBS)
- Behold ye among the heathen, and regard, and wonder marvelously: for [I] will work a work in your days, [which] ye will not believe though it be told [you] .
- Young's Literal Translation (YLT)
- Look ye on nations, and behold and marvel greatly. For a work He is working in your days, Ye do not believe though it is declared.
Read in context
- 3ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
- 4ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
- 5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
- 6ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
- 7ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
Cross references
- Acts 13:40–41 ಅಪೊಸ್ತಲರ ಕೃತ್ಯಗಳು 13:40–41ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- Lamentations 4:12 ಪ್ರಲಾಪಗಳು 4:12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
- Jeremiah 5:12–13 ಯೆರೆಮೀಯ 5:12–13ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- Isaiah 29:9 ಯೆಶಾಯ 29:9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
- Jeremiah 9:25–26 ಯೆರೆಮೀಯ 9:25–26ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ. ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Jeremiah 25:14–29 ಯೆರೆಮೀಯ 25:14–29ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Ezekiel 12:22–28 ಯೆಹೆಜ್ಕೇಲನು 12:22–28ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು? ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು. ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ. ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Zephaniah 1:2 ಚೆಫನ್ಯ 1:2ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.