Habakkuk · chapter 2 · verse 1
Habakkuk 2:1 in Kannada
ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
Nanna kaavalalli nintu gopurada mele neleyaagiddu aatanu nanage enu heluvano, nanna tarkada vishaya enu uttara kodabeko noduvadakke kaadukondiruvenu.
Habakkuk 2:1 in English
- King James Version (KJV)
- I will stand upon my watch, and set me upon the tower, and will watch to see what he will say unto me, and what I shall answer when I am reproved.
- World English Bible (WEB)
- I will stand at my watch and set myself on the ramparts, and will look out to see what he will say to me, and what I will answer concerning my complaint.
- American Standard Version (ASV)
- I will stand upon my watch, and set me upon the tower, and will look forth to see what he will speak with me, and what I shall answer concerning my complaint.
- Bible in Basic English (BBE)
- I will take my position and be on watch, placing myself on my tower, looking out to see what he will say to me, and what answer he will give to my protest.
- Darby Translation (DBY)
- I will stand upon my watch, and set me upon the tower, and will look forth to see what he will say unto me, and what I shall answer as to my reproof.
- Webster's Bible (WBS)
- I will stand upon my watch, and seat myself upon the tower, and will watch to see what he will say to me, and what I shall answer when I am reproved.
- Young's Literal Translation (YLT)
- On my charge I stand, and I station myself on a bulwark, and I watch to see what He doth speak against me, and what I do reply to my reproof.
Read in context
- 1ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
- 2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- 3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
Cross references
- Isaiah 21:8 ಯೆಶಾಯ 21:8ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 2 Samuel 18:24 2 ಸಮುವೇಲನು 18:24ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
- Psalm 85:8 ಕೀರ್ತನೆಗಳು 85:8ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
- Psalm 73:16–17 ಕೀರ್ತನೆಗಳು 73:16–17ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- Psalm 5:3 ಕೀರ್ತನೆಗಳು 5:3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- 2 Corinthians 13:3 2 ಕೊರಿಂಥದವರಿಗೆ 13:3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Job 31:37 ಯೋಬನು 31:37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- Isaiah 21:11–12 ಯೆಶಾಯ 21:11–12ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು? ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
- Job 23:5–7 ಯೋಬನು 23:5–7ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Habakkuk 1:12–17 ಹಬಕ್ಕೂಕ 1:12–17ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ. ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ? ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ? ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ. ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?