Habakkuk · chapter 2 · verse 10
Habakkuk 2:10 in Kannada
ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
Aneka janagalannu kadidubiduvadarinda ninna manege naachikeyannu yochisiddee; svanta praanakke virodhavaagi paapamaadiddee.
Habakkuk 2:10 in English
- King James Version (KJV)
- Thou hast consulted shame to thy house by cutting off many people, and hast sinned [against] thy soul.
- World English Bible (WEB)
- You have devised shame to your house by cutting off many peoples, and have sinned against your soul.
- American Standard Version (ASV)
- Thou hast devised shame to thy house, by cutting off many peoples, and hast sinned against thy soul.
- Bible in Basic English (BBE)
- You have been a cause of shame to your house by cutting off a number of peoples, and sinning against your soul.
- Darby Translation (DBY)
- Thou hast devised shame to thy house, by cutting off many peoples, and hast sinned against thine own soul.
- Webster's Bible (WBS)
- Thou hast consulted shame to thy house by cutting off many people, and hast sinned [against] thy soul.
- Young's Literal Translation (YLT)
- Thou hast counselled a shameful thing to thy house, To cut off many peoples, and sinful [is] thy soul.
Read in context
- 8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- 9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
- 10ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
- 11ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- 12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
Cross references
- 2 Kings 9:26 2 ಅರಸುಗಳು 9:26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- Nahum 1:14 ನಹೂಮ 1:14ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
- Isaiah 14:20–22 ಯೆಶಾಯ 14:20–22ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 33:11 ಯೆಶಾಯ 33:11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
- Jeremiah 26:19 ಯೆರೆಮೀಯ 26:19ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
- 1 Kings 2:23 1 ಅರಸುಗಳು 2:23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
- 2 Kings 10:7 2 ಅರಸುಗಳು 10:7ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- Habakkuk 2:16 ಹಬಕ್ಕೂಕ 2:16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Numbers 16:38 ಅರಣ್ಯಕಾಂಡ 16:38ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Proverbs 1:18 ಜ್ಞಾನೋಕ್ತಿಗಳು 1:18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.