Habakkuk · chapter 2 · verse 12
Habakkuk 2:12 in Kannada
ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
Oorannu raktadinda katti, pattanavannu anyaaya dinda sthaapisuvavanige ayyo!
Habakkuk 2:12 in English
- King James Version (KJV)
- Woe to him that buildeth a town with blood, and stablisheth a city by iniquity!
- World English Bible (WEB)
- Woe to him who builds a town with blood, and establishes a city by iniquity!
- American Standard Version (ASV)
- Woe to him that buildeth a town with blood, and establisheth a city by iniquity!
- Bible in Basic English (BBE)
- A curse on him who is building a place with blood, and basing a town on evil-doing!
- Darby Translation (DBY)
- Woe to him that buildeth a town with blood, and establisheth a city by unrighteousness!
- Webster's Bible (WBS)
- Woe to him that buildeth a town with blood, and establisheth a city by iniquity!
- Young's Literal Translation (YLT)
- Woe [to] him who is building a city by blood, And establishing a city by iniquity.
Read in context
- 10ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
- 11ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- 12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- 13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- 14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
Cross references
- Micah 3:10 ಮೀಕ 3:10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
- Nahum 3:1 ನಹೂಮ 3:1ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
- Daniel 4:27–31 ದಾನಿಯೇಲನು 4:27–31ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು. ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು. ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು. ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು. ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Joshua 6:26 ಯೆಹೋಶುವ 6:26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- Jeremiah 22:13–17 ಯೆರೆಮೀಯ 22:13–17ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ! ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Genesis 4:11–17 ಆದಿಕಾಂಡ 4:11–17ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ. ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು. ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ. ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು. ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು. ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು. ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
- 1 Kings 16:34 1 ಅರಸುಗಳು 16:34ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- John 11:47–50 ಯೋಹಾನನು 11:47–50ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- Ezekiel 24:9 ಯೆಹೆಜ್ಕೇಲನು 24:9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.