Habakkuk · chapter 2 · verse 3
Habakkuk 2:3 in Kannada
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
Darshanavu innu nemakavaada kaalakke untu; aadare kadeyalli adu sullaagade maatanaaduvadu; adu tadavaa daroo adakke kaadukondiru; adu tadamaadade nishchayavaagi baruvadu.
Habakkuk 2:3 in English
- King James Version (KJV)
- For the vision [is] yet for an appointed time, but at the end it shall speak, and not lie: though it tarry, wait for it; because it will surely come, it will not tarry.
- World English Bible (WEB)
- For the vision is yet for the appointed time, and it hurries toward the end, and won’t prove false. Though it takes time, wait for it, because it will surely come. It won’t delay.
- American Standard Version (ASV)
- For the vision is yet for the appointed time, and it hasteth toward the end, and shall not lie: though it tarry, wait for it; because it will surely come, it will not delay.
- Bible in Basic English (BBE)
- For the vision is still for the fixed time, and it is moving quickly to the end, and it will not be false: even if it is slow in coming, go on waiting for it; because it will certainly come, it will not be kept back.
- Darby Translation (DBY)
- For the vision is yet for an appointed time, but it hasteth to the end, and shall not lie: though it tarry, wait for it; for it will surely come, it will not delay.
- Webster's Bible (WBS)
- For the vision [is] yet for an appointed time, but at the end it shall speak, and not lie: though it may tarry, wait for it; because it will surely come, it will not tarry.
- Young's Literal Translation (YLT)
- For yet the vision [is] for a season, And it breatheth for the end, and doth not lie, If it tarry, wait for it, For surely it cometh, it is not late.
Read in context
- 1ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
- 2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- 3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- 4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- 5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
Cross references
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Hebrews 10:36–37 ಇಬ್ರಿಯರಿಗೆ 10:36–37ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- Ezekiel 12:25 ಯೆಹೆಜ್ಕೇಲನು 12:25ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 102:13 ಕೀರ್ತನೆಗಳು 102:13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- Psalm 130:5–6 ಕೀರ್ತನೆಗಳು 130:5–6ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- James 5:7–8 ಯಾಕೋಬನು 5:7–8ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- Luke 18:7–8 ಲೂಕನು 18:7–8ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- 2 Thessalonians 2:6–8 2 ಥೆಸಲೊನೀಕದವರಿಗೆ 2:6–8ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.