Habakkuk · chapter 2 · verse 4
Habakkuk 2:4 in Kannada
ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
Igo, hechchisikondavana aatmavu tannalli yathaarthavalla; aadare neetivantanu tanna vishvaasadinda badukuvanu.
Habakkuk 2:4 in English
- King James Version (KJV)
- Behold, his soul [which] is lifted up is not upright in him: but the just shall live by his faith.
- World English Bible (WEB)
- Behold, his soul is puffed up. It is not upright in him, but the righteous will live by his faith.
- American Standard Version (ASV)
- Behold, his soul is puffed up, it is not upright in him; but the righteous shall live by his faith.
- Bible in Basic English (BBE)
- As for the man of pride, my soul has no pleasure in him; but the upright man will have life through his good faith.
- Darby Translation (DBY)
- Behold, his soul is puffed up, it is not upright within him: but the just shall live by his faith.
- Webster's Bible (WBS)
- Behold, his soul [which] is lifted up, is not upright in him: but the just shall live by his faith.
- Young's Literal Translation (YLT)
- Lo, a presumptuous one! Not upright is his soul within him, And the righteous by his stedfastness liveth.
Read in context
- 2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- 3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- 4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- 5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
- 6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
Cross references
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Galatians 3:11–12 ಗಲಾತ್ಯದವರಿಗೆ 3:11–12ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
- Galatians 2:16 ಗಲಾತ್ಯದವರಿಗೆ 2:16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- 1 John 5:10–12 1 ಯೋಹಾನನು 5:10–12ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Daniel 5:20–23 ದಾನಿಯೇಲನು 5:20–23ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.