Habakkuk · chapter 2 · verse 7
Habakkuk 2:7 in Kannada
ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
Ninnannu kachchuvavaru kshanamaatradalli elaro? Ninnannu peedisuvavaru echcharavaagaro? Aaga neenu avarige sulige yaaguvi.
Habakkuk 2:7 in English
- King James Version (KJV)
- Shall they not rise up suddenly that shall bite thee, and awake that shall vex thee, and thou shalt be for booties unto them?
- World English Bible (WEB)
- Won’t your debtors rise up suddenly, and wake up those who make you tremble, and you will be their victim?
- American Standard Version (ASV)
- Shall they not rise up suddenly that shall bite thee, and awake that shall vex thee, and thou shalt be for booty unto them?
- Bible in Basic English (BBE)
- Will not your creditors suddenly be moved against you, and your troublers get up from their sleep, and you will be to them like goods taken in war?
- Darby Translation (DBY)
- Shall they not rise up suddenly that shall bite thee, and they awake up that shall vex thee, and thou shalt be for booties unto them?
- Webster's Bible (WBS)
- Shall they not rise suddenly that shall bite thee, and awake that shall disturb thee, and thou shalt be for booties to them?
- Young's Literal Translation (YLT)
- Do not thy usurers instantly rise up, And those shaking thee awake up, And thou hast been for a spoil to them?
Read in context
- 5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
- 6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
- 7ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
- 8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- 9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
Cross references
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- Ecclesiastes 10:8 ಪ್ರಸಂಗಿ 10:8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- Daniel 5:25–31 ದಾನಿಯೇಲನು 5:25–31ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Jeremiah 51:57 ಯೆರೆಮೀಯ 51:57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Isaiah 13:16–18 ಯೆಶಾಯ 13:16–18ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Isaiah 45:1–3 ಯೆಶಾಯ 45:1–3ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Jeremiah 50:21–32 ಯೆರೆಮೀಯ 50:21–32ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ. ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು. ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು! ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ; ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
- Nahum 1:9–10 ನಹೂಮ 1:9–10ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.