Habakkuk · chapter 2 · verse 8
Habakkuk 2:8 in Kannada
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
Neenu aneka janaangagalannu soore maadiddarinda janaralli ulidavarellaa ninnannu soore maaduvaru; manushyara raktakkaagi desha, pattana, adara ellaa nivaasigala balaatkaarada nimittave.
Habakkuk 2:8 in English
- King James Version (KJV)
- Because thou hast spoiled many nations, all the remnant of the people shall spoil thee; because of men’s blood, and [for] the violence of the land, of the city, and of all that dwell therein.
- World English Bible (WEB)
- Because you have plundered many nations, all the remnant of the peoples will plunder you because of men’s blood, and for the violence done to the land, to the city and to all who dwell in it.
- American Standard Version (ASV)
- Because thou hast plundered many nations, all the remnant of the peoples shall plunder thee, because of men’s blood, and for the violence done to the land, to the city and to all that dwell therein.
- Bible in Basic English (BBE)
- Because you have taken their goods from great nations, all the rest of the peoples will take your goods from you; because of men's blood and violent acts against the land and the town and all who are living in it.
- Darby Translation (DBY)
- Because thou hast plundered many nations, all the rest of the peoples shall plunder thee; because of men's blood, and for the violence [done] to the land, to the city, and all that dwell therein.
- Webster's Bible (WBS)
- Because thou hast laid waste many nations, all the remnant of the people shall lay thee waste; because of men's blood, and [for] the violence of the land, of the city, and of all that dwell therein.
- Young's Literal Translation (YLT)
- Because thou hast spoiled many nations, Spoil thee do all the remnant of the peoples, Because of man's blood, and of violence [to] the land, [To] the city, and [to] all dwelling in it.
Read in context
- 6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
- 7ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
- 8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- 9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
- 10ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
Cross references
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- Habakkuk 2:17 ಹಬಕ್ಕೂಕ 2:17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- Jeremiah 27:7 ಯೆರೆಮೀಯ 27:7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Jeremiah 51:8 ಯೆರೆಮೀಯ 51:8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- Zechariah 2:8–9 ಜೆಕರ್ಯ 2:8–9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- Jeremiah 51:13 ಯೆರೆಮೀಯ 51:13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
- Jeremiah 51:44 ಯೆರೆಮೀಯ 51:44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- Jeremiah 50:33–34 ಯೆರೆಮೀಯ 50:33–34ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Zechariah 12:2–4 ಜೆಕರ್ಯ 12:2–4ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
- Revelation 18:20–24 ಪ್ರಕಟನೆ 18:20–24ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Zechariah 14:12 ಜೆಕರ್ಯ 14:12ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.