Habakkuk · chapter 3 · verse 1
Habakkuk 3:1 in Kannada
ಶಿಗ್ಯೋನೋತನ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಕರ್ತನೇ, ನಿನ್ನ ಮಾತನ್ನು ಕೇಳಿ ಭಯಪಟ್ಟಿದ್ದೇನೆ.
Shigyonotana mele pravaadiyaada habakkookana praarthane. Kartane, ninna maatannu keli bhayapattiddene.
Habakkuk 3:1 in English
- King James Version (KJV)
- A prayer of Habakkuk the prophet upon Shigionoth.
- World English Bible (WEB)
- A prayer of Habakkuk, the prophet, set to victorious music.
- American Standard Version (ASV)
- A prayer of Habakkuk the prophet, set to Shigionoth.
- Bible in Basic English (BBE)
- A prayer of Habakkuk the prophet, put to Shigionoth.
- Darby Translation (DBY)
- A Prayer of Habakkuk the prophet upon Shigionoth.
- Webster's Bible (WBS)
- A prayer of Habakkuk the prophet upon Shigionoth.
- Young's Literal Translation (YLT)
- A prayer of Habakkuk the prophet concerning erring ones:
Read in context
- 1ಶಿಗ್ಯೋನೋತನ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಕರ್ತನೇ, ನಿನ್ನ ಮಾತನ್ನು ಕೇಳಿ ಭಯಪಟ್ಟಿದ್ದೇನೆ.
- 2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- 3ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
Cross references
- Psalm 90:1–17 ಕೀರ್ತನೆಗಳು 90:1–17ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ. ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ. ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ; ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ. ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ. ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ. ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು. ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ. ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು. ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು. ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು; ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 7:1–17 ಕೀರ್ತನೆಗಳು 7:1–17ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು; ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು. ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ. ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ. ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ. ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ. ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು. ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ. ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ. ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು. ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Psalm 86:1–17 ಕೀರ್ತನೆಗಳು 86:1–17ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ. ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು. ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ. ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ. ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು. ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ. ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು. ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು. ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ. ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ. ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ. ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ. ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.