Habakkuk · chapter 3 · verse 16
Habakkuk 3:16 in Kannada
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
Naanu kelidaaga nanna hotteyu talamalagonditu, aa shabdakke nanna tutigalu adaridavu; ikkattina dinadalli naanu vishraantiyannu honduva haage koleyuvikeyu nanna elubugalalli seritu, naanu ninta haageye nadugidenu; aatanu janara balige baruvaaga tanna sainyagala kooda avara mele daali maaduvanu.
Habakkuk 3:16 in English
- King James Version (KJV)
- When I heard, my belly trembled; my lips quivered at the voice: rottenness entered into my bones, and I trembled in myself, that I might rest in the day of trouble: when he cometh up unto the people, he will invade them with his troops.
- World English Bible (WEB)
- I heard, and my body trembled. My lips quivered at the voice. Rottenness enters into my bones, and I tremble in my place because I must wait quietly for the day of trouble, for the coming up of the people who invade us.
- American Standard Version (ASV)
- I heard, and my body trembled, My lips quivered at the voice; Rottenness entereth into my bones, and I tremble in my place; Because I must wait quietly for the day of trouble, For the coming up of the people that invadeth us.
- Bible in Basic English (BBE)
- Hearing it, my inner parts were moved, and my lips were shaking at the sound; my bones became feeble, and my steps were uncertain under me: I gave sounds of grief in the day of trouble, when his forces came up against the people in bands.
- Darby Translation (DBY)
- I heard, and my belly trembled; My lips quivered at the voice; Rottenness entered into my bones, and I trembled in my place, That I might rest in the day of distress, When their invader shall come up against the people.
- Webster's Bible (WBS)
- When I heard, my belly trembled; my lips quivered at the voice: rottenness entered into my bones, and I trembled in myself, that I might rest in the day of trouble: when he cometh up to the people, he will invade them with his troops.
- Young's Literal Translation (YLT)
- I have heard, and my belly trembleth, At the noise have my lips quivered, Rottenness doth come into my bones, And in my place I do tremble, That I rest for a day of distress, At the coming up of the people, he overcometh it.
Read in context
- 14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
- 15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- 16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- 17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- 18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
Cross references
- Jeremiah 23:9 ಯೆರೆಮೀಯ 23:9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
- Daniel 10:8 ದಾನಿಯೇಲನು 10:8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
- Habakkuk 1:5–11 ಹಬಕ್ಕೂಕ 1:5–11ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ. ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು. ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು. ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Jeremiah 45:3–5 ಯೆರೆಮೀಯ 45:3–5ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- Psalm 94:12–13 ಕೀರ್ತನೆಗಳು 94:12–13ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು. ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
- 2 Thessalonians 1:6–9 2 ಥೆಸಲೊನೀಕದವರಿಗೆ 1:6–9ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Jeremiah 25:9–11 ಯೆರೆಮೀಯ 25:9–11ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ. ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ. ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
- Jeremiah 15:10–11 ಯೆರೆಮೀಯ 15:10–11ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ. ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
- Deuteronomy 28:49–52 ಧರ್ಮೋಪದೇಶಕಾಂಡ 28:49–52ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- Isaiah 26:20–21 ಯೆಶಾಯ 26:20–21ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು. ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Original words (Hebrew)
- heard · H8085שָׁמַע shâmaʻ
- belly · H990בֶּטֶן beṭen
- trembled · H7264רָגַז râgaz
- lips · H8193שָׂפָה sâphâh
- quivered · H6750צָלַל tsâlal
- voice · H6963קוֹל qôwl
- rottenness · H7538רָקָב râqâb
- entered · H935בּוֹא bôwʼ
- bones · H6106עֶצֶם ʻetsem
- trembled · H7264רָגַז râgaz
- rest · H5117נוּחַ nûwach
- day · H3117יוֹם yôwm
- trouble · H6869צָרָה tsârâh
- up · H5927עָלָה ʻâlâh
- people · H5971עַם ʻam
- troops · H1464גּוּד gûwd