Habakkuk · chapter 3 · verse 7
Habakkuk 3:7 in Kannada
ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
Kooshaanina deregalannu kashtadolage nodi denu; midyaanina deshada teregalu nadugidavu.
Habakkuk 3:7 in English
- King James Version (KJV)
- I saw the tents of Cushan in affliction: [and] the curtains of the land of Midian did tremble.
- World English Bible (WEB)
- I saw the tents of Cushan in affliction. The dwellings of the land of Midian trembled.
- American Standard Version (ASV)
- I saw the tents of Cushan in affliction; The curtains of the land of Midian did tremble.
- Bible in Basic English (BBE)
- The curtains of Cushan were troubled, and the tents of Midian were shaking.
- Darby Translation (DBY)
- I saw the tents of Cushan in affliction; The curtains of the land of Midian did tremble.
- Webster's Bible (WBS)
- I saw the tents of Cushan in affliction: [and] the curtains of the land of Midian trembled.
- Young's Literal Translation (YLT)
- Under sorrow I have seen tents of Cushan, Tremble do curtains of the land of Midian.
Read in context
- 5ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- 6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- 7ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
- 8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
- 9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
Cross references
- Exodus 15:14–16 ವಿಮೋಚನಕಾಂಡ 15:14–16ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Numbers 31:2–12 ಅರಣ್ಯಕಾಂಡ 31:2–12ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು. ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು. ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು. ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು. ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು. ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು. ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು. ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು. ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
- Genesis 10:6–7 ಆದಿಕಾಂಡ 10:6–7ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು. ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- Numbers 22:3–4 ಅರಣ್ಯಕಾಂಡ 22:3–4ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- Psalm 83:5–10 ಕೀರ್ತನೆಗಳು 83:5–10ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- Judges 7:24–25 ನ್ಯಾಯಸ್ಥಾಪಕರು 7:24–25ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು. ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- Joshua 9:24 ಯೆಹೋಶುವ 9:24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
- Joshua 2:10 ಯೆಹೋಶುವ 2:10ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
- Genesis 25:1–4 ಆದಿಕಾಂಡ 25:1–4ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು. ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.