Skip to content
ThuthiThuthiThuthi
Haggai · chapter 1 of 2 · 15 verses

Haggai 1 in Kannada

ಹಗ್ಗಾಯ 1

  1. ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

    In the second year of Darius the king, in the sixth month, in the first day of the month, came the word of the LORD by Haggai the prophet unto Zerubbabel the son of Shealtiel, governor of Judah, and to Joshua the son of Josedech, the high priest, saying,

  2. ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.

    Thus speaketh the LORD of hosts, saying, This people say, The time is not come, the time that the LORD’s house should be built.

  3. ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--

    Then came the word of the LORD by Haggai the prophet, saying,

  4. ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?

    [Is it] time for you, O ye, to dwell in your cieled houses, and this house [lie] waste?

  5. ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

    Now therefore thus saith the LORD of hosts; Consider your ways.

  6. ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.

    Ye have sown much, and bring in little; ye eat, but ye have not enough; ye drink, but ye are not filled with drink; ye clothe you, but there is none warm; and he that earneth wages earneth wages [to put it] into a bag with holes.

  7. ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

    Thus saith the LORD of hosts; Consider your ways.

  8. ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.

    Go up to the mountain, and bring wood, and build the house; and I will take pleasure in it, and I will be glorified, saith the LORD.

  9. ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?

    Ye looked for much, and, lo, [it came] to little; and when ye brought [it] home, I did blow upon it. Why? saith the LORD of hosts. Because of mine house that [is] waste, and ye run every man unto his own house.

  10. ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

    Therefore the heaven over you is stayed from dew, and the earth is stayed [from] her fruit.

  11. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

    And I called for a drought upon the land, and upon the mountains, and upon the corn, and upon the new wine, and upon the oil, and upon [that] which the ground bringeth forth, and upon men, and upon cattle, and upon all the labour of the hands.

  12. ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

    Then Zerubbabel the son of Shealtiel, and Joshua the son of Josedech, the high priest, with all the remnant of the people, obeyed the voice of the LORD their God, and the words of Haggai the prophet, as the LORD their God had sent him, and the people did fear before the LORD.

  13. ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.

    Then spake Haggai the LORD’s messenger in the LORD’s message unto the people, saying, I [am] with you, saith the LORD.

  14. ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

    And the LORD stirred up the spirit of Zerubbabel the son of Shealtiel, governor of Judah, and the spirit of Joshua the son of Josedech, the high priest, and the spirit of all the remnant of the people; and they came and did work in the house of the LORD of hosts, their God,

  15. ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

    In the four and twentieth day of the sixth month, in the second year of Darius the king.

All chapters of Haggai · Kannada Bible · Haggai 1 in Tamil

Kannada Bible: Kannada Old Version, public domain.

King James Version: public domain.