Haggai · chapter 1 · verse 8
Haggai 1:8 in Kannada
ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
Bettakke hogi maravannu tandu maneyannu kattiri; aaga naanu adakke mechchi mahimeyannu honduvenendu kartanu heluttaane.
Haggai 1:8 in English
- King James Version (KJV)
- Go up to the mountain, and bring wood, and build the house; and I will take pleasure in it, and I will be glorified, saith the LORD.
- World English Bible (WEB)
- Go up to the mountain, bring wood, and build the house. I will take pleasure in it, and I will be glorified,” says the LORD.
- American Standard Version (ASV)
- Go up to the mountain, and bring wood, and build the house; and I will take pleasure in it, and I will be glorified, saith Jehovah.
- Bible in Basic English (BBE)
- Go up to the hills and get wood and put up the house; and I will take pleasure in it and be honoured, says the Lord.
- Darby Translation (DBY)
- Go up to the mountain and bring wood, and build the house, and I will take pleasure in it, and I will be glorified, saith Jehovah.
- Webster's Bible (WBS)
- Go up to the mountain, and bring wood, and build the house; and I will take pleasure in it, and I will be glorified, saith the LORD.
- Young's Literal Translation (YLT)
- Go up the mountain, and ye have brought in wood, And build the house, and I am pleased with it. And I am honoured, said Jehovah.
Read in context
- 6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- 7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- 8ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
- 9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
- 10ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
Cross references
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 2 Chronicles 7:16 2 ಪೂರ್ವಕಾಲವೃತ್ತಾಂತ 7:16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
- Haggai 2:7 ಹಗ್ಗಾಯ 2:7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Chronicles 2:8–10 2 ಪೂರ್ವಕಾಲವೃತ್ತಾಂತ 2:8–10ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ. ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು. ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
- Jonah 3:1–2 ಯೋನ 3:1–2ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು, ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
- Haggai 1:2–4 ಹಗ್ಗಾಯ 1:2–4ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ. ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ-- ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- Exodus 29:43 ವಿಮೋಚನಕಾಂಡ 29:43ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- 1 Kings 9:3 1 ಅರಸುಗಳು 9:3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- Isaiah 60:13 ಯೆಶಾಯ 60:13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- John 13:31–32 ಯೋಹಾನನು 13:31–32ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.