Haggai · chapter 2 · verse 13
Haggai 2:13 in Kannada
ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
Aaga haggaayanu--aadare henadinda ashuddhanaadavanu, ivugalalli yaavadannaadaroo muttidare, ashuddhavaaguvado andanu. Yaaja karu uttara kottu--ashuddavaaguvadu andaru.
Haggai 2:13 in English
- King James Version (KJV)
- Then said Haggai, If [one that is] unclean by a dead body touch any of these, shall it be unclean? And the priests answered and said, It shall be unclean.
- World English Bible (WEB)
- Then Haggai said, “If one who is unclean by reason of a dead body touches any of these, will it be unclean?” The priests answered, “It will be unclean.”
- American Standard Version (ASV)
- Then said Haggai, If one that is unclean by reason of a dead body touch any of these, shall it be unclean? And the priests answered and said, It shall be unclean.
- Bible in Basic English (BBE)
- Then Haggai said, Will any of these be made unclean by the touch of one who is unclean through touching a dead body? And the priests answering said, It will be made unclean.
- Darby Translation (DBY)
- And Haggai said, If one that is unclean by a dead body touch any of these, is it become unclean? And the priests answered and said, It shall be unclean.
- Webster's Bible (WBS)
- Then said Haggai, If [one that is] unclean by a dead body shall touch any of these, shall it be unclean? And the priests answered and said, It shall be unclean.
- Young's Literal Translation (YLT)
- And Haggai saith, 'If the unclean of body doth come against any of these, is it unclean?' And the priests answer and say, 'It is unclean.'
Read in context
- 11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
- 12ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
- 13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
- 14ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
- 15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
Cross references
- Numbers 9:6–10 ಅರಣ್ಯಕಾಂಡ 9:6–10ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು. ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು. ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು. ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
- Numbers 5:2–3 ಅರಣ್ಯಕಾಂಡ 5:2–3ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- Numbers 19:11–22 ಅರಣ್ಯಕಾಂಡ 19:11–22ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು. ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ. ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು. ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು. ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು. ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ. ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು. ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- Leviticus 22:4–6 ಯಾಜಕಕಾಂಡ 22:4–6ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು-- ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.