Haggai · chapter 2 · verse 19
Haggai 2:19 in Kannada
ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
Beejavu innu kanajadalli unto? Mattu draakshe, anjoora, daalimbara, enne maragalu innu phalisalilla vallaa. Ee dinavu modalugondu nimmannu aasheervadisuvenu.
Haggai 2:19 in English
- King James Version (KJV)
- Is the seed yet in the barn? yea, as yet the vine, and the fig tree, and the pomegranate, and the olive tree, hath not brought forth: from this day will I bless [you].
- World English Bible (WEB)
- Is the seed yet in the barn? Yes, the vine, the fig tree, the pomegranate, and the olive tree haven’t produced. From today I will bless you.’”
- American Standard Version (ASV)
- Is the seed yet in the barn? yea, the vine, and the fig-tree, and the pomegranate, and the olive-tree have not brought forth; from this day will I bless [you].
- Bible in Basic English (BBE)
- Is the seed still in the store-house? have the vine and the fig-tree, the pomegranate and the olive-tree, still not given their fruit? from this day I will send my blessing on you.
- Darby Translation (DBY)
- Is the seed yet in the barn? yea, the vine, and the fig-tree, and the pomegranate, and the olive-tree have not brought forth: from this day will I bless [you].
- Webster's Bible (WBS)
- Is the seed yet in the barn? yes, as yet the vine, and the fig-tree, and the pomegranate, and the olive-tree, hath not brought forth: from this day will I bless [you] .
- Young's Literal Translation (YLT)
- Is the seed yet in the barn? And hitherto the vine and the fig, And the pomegranate, and the olive-tree, Have not borne — from this day I bless.'
Read in context
- 17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
- 19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- 20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
- 21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
Cross references
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Habakkuk 3:17–18 ಹಬಕ್ಕೂಕ 3:17–18ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Zechariah 8:11–15 ಜೆಕರ್ಯ 8:11–15ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು. ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ. ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- Psalm 128:1–5 ಕೀರ್ತನೆಗಳು 128:1–5ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು. ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Deuteronomy 15:10 ಧರ್ಮೋಪದೇಶಕಾಂಡ 15:10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Psalm 84:12 ಕೀರ್ತನೆಗಳು 84:12ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Leviticus 26:3–13 ಯಾಜಕಕಾಂಡ 26:3–13ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ. ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ. ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು. ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ. ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
- Deuteronomy 28:2–15 ಧರ್ಮೋಪದೇಶಕಾಂಡ 28:2–15ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು. ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.