Haggai · chapter 2 · verse 21
Haggai 2:21 in Kannada
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
Hegandare, yehoodada adhipatiyaada jerubbaabelanige neenu helatakkaddenandare--naanu aakaashagalannoo bhoomiyannoo kadalisuvenu.
Haggai 2:21 in English
- King James Version (KJV)
- Speak to Zerubbabel, governor of Judah, saying, I will shake the heavens and the earth;
- World English Bible (WEB)
- “Speak to Zerubbabel, governor of Judah, saying, ‘I will shake the heavens and the earth.
- American Standard Version (ASV)
- Speak to Zerubbabel, governor of Judah, saying, I will shake the heavens and the earth;
- Bible in Basic English (BBE)
- Say to Zerubbabel, ruler of Judah, I will make a shaking of the heavens and the earth,
- Darby Translation (DBY)
- Speak to Zerubbabel, governor of Judah, saying, I will shake the heavens and the earth;
- Webster's Bible (WBS)
- Speak to Zerubbabel, governor of Judah, saying, I will shake the heavens and the earth;
- Young's Literal Translation (YLT)
- 'Speak unto Zerubbabel governor of Judah, saying: I am shaking the heavens and the earth,
Read in context
- 19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- 20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
- 21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
- 22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Zechariah 4:6–10 ಜೆಕರ್ಯ 4:6–10ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ. ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Haggai 2:6–7 ಹಗ್ಗಾಯ 2:6–7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Hebrews 12:26–27 ಇಬ್ರಿಯರಿಗೆ 12:26–27ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Ezra 5:2 ಎಜ್ರನು 5:2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Psalm 46:6 ಕೀರ್ತನೆಗಳು 46:6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
- Revelation 16:17–19 ಪ್ರಕಟನೆ 16:17–19ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- 1 Chronicles 3:19 1 ಪೂರ್ವಕಾಲವೃತ್ತಾಂತ 3:19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Ezekiel 26:15 ಯೆಹೆಜ್ಕೇಲನು 26:15ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
- Ezra 2:2 ಎಜ್ರನು 2:2ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
- Ezekiel 38:19–20 ಯೆಹೆಜ್ಕೇಲನು 38:19–20ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು; ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.