Haggai · chapter 2 · verse 5
Haggai 2:5 in Kannada
ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
Neevu aiguptadola ginda horage bandaaga naanu nimma sangada odambadike maadida vaakyada prakaara nanna aatmavu nimma madhyadalli nilluttade; neevu bhayapada bediri.
Haggai 2:5 in English
- King James Version (KJV)
- [According to] the word that I covenanted with you when ye came out of Egypt, so my spirit remaineth among you: fear ye not.
- World English Bible (WEB)
- This is the word that I covenanted with you when you came out of Egypt, and my Spirit lived among you. ‘Don’t be afraid.’
- American Standard Version (ASV)
- [according to] the word that I covenanted with you when ye came out of Egypt, and my Spirit abode among you: fear ye not.
- Bible in Basic English (BBE)
- The agreement which I made with you when you came out of Egypt, and my spirit, are with you still; have no fear.
- Darby Translation (DBY)
- The word that I covenanted with you when ye came out of Egypt, and my Spirit, remain among you: fear ye not.
- Webster's Bible (WBS)
- [According to] the word that I covenanted with you when ye came out of Egypt, so my spirit remaineth among you: fear ye not.
- Young's Literal Translation (YLT)
- The thing that I covenanted with you, In your coming forth from Egypt, And My Spirit is remaining in your midst, fear not.
Read in context
- 3ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
- 4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- 5ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- 7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
- Exodus 29:45–46 ವಿಮೋಚನಕಾಂಡ 29:45–46ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು. ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
- Isaiah 41:13 ಯೆಶಾಯ 41:13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- Exodus 34:10 ವಿಮೋಚನಕಾಂಡ 34:10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- Exodus 33:12–14 ವಿಮೋಚನಕಾಂಡ 33:12–14ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ. ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು. ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
- Zechariah 8:15 ಜೆಕರ್ಯ 8:15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
- Zechariah 8:13 ಜೆಕರ್ಯ 8:13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Psalm 51:11–12 ಕೀರ್ತನೆಗಳು 51:11–12ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- John 14:16–17 ಯೋಹಾನನು 14:16–17ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.