Haggai · chapter 2 · verse 7
Haggai 2:7 in Kannada
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Ellaa janaangagalannu adurisuttene; ellaa janaangagala ishtavastugalu bandu odagalu ee aalayavannu mahimeyinda tumbisuttenendu sainyagala kartanu heluttaane.
Haggai 2:7 in English
- King James Version (KJV)
- And I will shake all nations, and the desire of all nations shall come: and I will fill this house with glory, saith the LORD of hosts.
- World English Bible (WEB)
- and I will shake all nations. The treasure of all nations will come, and I will fill this house with glory, says the LORD of Armies.
- American Standard Version (ASV)
- and I will shake all nations; and the precious things of all nations shall come; and I will fill this house with glory, saith Jehovah of hosts.
- Bible in Basic English (BBE)
- And I will make a shaking of all the nations, and the desired things of all nations will come: and I will make this house full of my glory, says the Lord of armies.
- Darby Translation (DBY)
- and I will shake all nations, and the desire of all nations shall come; and I will fill this house with glory, saith Jehovah of hosts.
- Webster's Bible (WBS)
- And I will shake all nations, and the desire of all nations shall come: and I will fill this house with glory, saith the LORD of hosts.
- Young's Literal Translation (YLT)
- And I have shaken all the nations, And they have come [to] the desire of all the nations, And I have filled this house [with] honour, Said Jehovah of Hosts.
Read in context
- 5ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- 7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- 1 Kings 8:11 1 ಅರಸುಗಳು 8:11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Luke 2:10–11 ಲೂಕನು 2:10–11ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Luke 2:27 ಲೂಕನು 2:27ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- Luke 2:46 ಲೂಕನು 2:46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Ezekiel 21:27 ಯೆಹೆಜ್ಕೇಲನು 21:27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Zechariah 9:9–10 ಜೆಕರ್ಯ 9:9–10ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.