Hebrews · chapter 10 · verse 36
Hebrews 10:36 in Kannada
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Devara chittavannu neraverisida mele vaagdaanavanu honduvante nimage taalmeyu avashyavaagide.
Hebrews 10:36 in English
- King James Version (KJV)
- For ye have need of patience, that, after ye have done the will of God, ye might receive the promise.
- World English Bible (WEB)
- For you need endurance so that, having done the will of God, you may receive the promise.
- American Standard Version (ASV)
- For ye have need of patience, that, having done the will of God, ye may receive the promise.
- Bible in Basic English (BBE)
- For, having done what was right in God's eyes, you have need of waiting before his word has effect for you.
- Darby Translation (DBY)
- For ye have need of endurance in order that, having done the will of God, ye may receive the promise.
- Webster's Bible (WBS)
- For ye have need of patience, that, after ye have done the will of God, ye may receive the promise.
- Young's Literal Translation (YLT)
- for of patience ye have need, that the will of God having done, ye may receive the promise,
Read in context
- 34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- 35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- 36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- 37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
Cross references
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- James 5:7–11 ಯಾಕೋಬನು 5:7–11ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- 1 Corinthians 13:7 1 ಕೊರಿಂಥದವರಿಗೆ 13:7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- Luke 21:19 ಲೂಕನು 21:19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- Hebrews 6:15 ಇಬ್ರಿಯರಿಗೆ 6:15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- Revelation 14:12 ಪ್ರಕಟನೆ 14:12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- Romans 8:25 ರೋಮಾಪುರದವರಿಗೆ 8:25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- James 1:3–4 ಯಾಕೋಬನು 1:3–4ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Matthew 10:22 ಮತ್ತಾಯನು 10:22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.