Hebrews · chapter 11 · verse 17
Hebrews 11:17 in Kannada
ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
Abrahaamanu shodhitanaagi nambike yindale isaakanannu samarpisidanu; aa vaagdaana galannu hondida avanu tanna obbane maganannu samarpisidanu.
Hebrews 11:17 in English
- King James Version (KJV)
- By faith Abraham, when he was tried, offered up Isaac: and he that had received the promises offered up his only begotten [son],
- World English Bible (WEB)
- By faith, Abraham, being tested, offered up Isaac. Yes, he who had gladly received the promises was offering up his only born son,
- American Standard Version (ASV)
- By faith Abraham, being tried, offered up Isaac: yea, he that had gladly received the promises was offering up his only begotten [son];
- Bible in Basic English (BBE)
- By faith Abraham made an offering of Isaac, when he was tested: and he with whom the agreement had been made gave up as an offering the only son of his body,
- Darby Translation (DBY)
- By faith Abraham, [when] tried, offered up Isaac, and he who had received to himself the promises offered up his only begotten [son],
- Webster's Bible (WBS)
- By faith Abraham, when he was tried, offered up Isaac: and he that had received the promises offered up his only-begotten [son] ,
- Young's Literal Translation (YLT)
- By faith Abraham hath offered up Isaac, being tried, and the only begotten he did offer up who did receive the promises,
Read in context
- 15ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
- 16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- 17ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
- 18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
- 19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
Cross references
- Genesis 22:16 ಆದಿಕಾಂಡ 22:16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- James 2:21–24 ಯಾಕೋಬನು 2:21–24ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- Genesis 22:1–12 ಆದಿಕಾಂಡ 22:1–12ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು. ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು. ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು. ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು. ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು. ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು. ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು. ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು. ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು. ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು. ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು. ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
- 1 Peter 1:6–7 1 ಪೇತ್ರನು 1:6–7ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- James 5:11 ಯಾಕೋಬನು 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Proverbs 17:3 ಜ್ಞಾನೋಕ್ತಿಗಳು 17:3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- 1 Peter 4:12 1 ಪೇತ್ರನು 4:12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- Job 2:3–6 ಯೋಬನು 2:3–6ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Daniel 11:35 ದಾನಿಯೇಲನು 11:35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
- Job 1:11–12 ಯೋಬನು 1:11–12ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.