Hebrews · chapter 11 · verse 28
Hebrews 11:28 in Kannada
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
Israayelyara chochchalamakkalannu sanharisuvavanu avarannu muttadante avanu paskavannoo rakta prokshaneyannoo aacharisiddu nambikeyindale.
Hebrews 11:28 in English
- King James Version (KJV)
- Through faith he kept the passover, and the sprinkling of blood, lest he that destroyed the firstborn should touch them.
- World English Bible (WEB)
- By faith he kept the Passover and the sprinkling of the blood, that the destroyer of the firstborn should not touch them.
- American Standard Version (ASV)
- By faith he kept the passover, and the sprinkling of the blood, that the destroyer of the firstborn should not touch them.
- Bible in Basic English (BBE)
- By faith he kept the Passover, and put the sign of the blood on the houses, so that the angel of destruction might not put their oldest sons to death.
- Darby Translation (DBY)
- By faith he celebrated the passover and the sprinkling of the blood, that the destroyer of the firstborn might not touch them.
- Webster's Bible (WBS)
- Through faith he kept the passover, and the sprinkling of blood, lest he that destroyed the first-born should touch them.
- Young's Literal Translation (YLT)
- by faith he kept the passover, and the sprinkling of the blood, that He who is destroying the first-born might not touch them.
Read in context
- 26ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- 27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- 28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- 29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- 30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
Cross references
- Exodus 12:21–30 ವಿಮೋಚನಕಾಂಡ 12:21–30ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ. ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು. ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು. ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು. ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು. ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು. ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು. ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Hebrews 9:19 ಇಬ್ರಿಯರಿಗೆ 9:19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Exodus 12:3–14 ವಿಮೋಚನಕಾಂಡ 12:3–14ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.