Hebrews · chapter 11 · verse 30
Hebrews 11:30 in Kannada
ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
Nambike yindale avaru sumaaru elu divasagalu yerikovina godegalannu suttida mele avu biddavu.
Hebrews 11:30 in English
- King James Version (KJV)
- By faith the walls of Jericho fell down, after they were compassed about seven days.
- World English Bible (WEB)
- By faith the walls of Jericho fell down after they had been encircled for seven days.
- American Standard Version (ASV)
- By faith the walls of Jericho fell down, after they had been compassed about for seven days.
- Bible in Basic English (BBE)
- By faith the walls of Jericho came down, after they had been circled for seven days.
- Darby Translation (DBY)
- By faith the walls of Jericho fell, having been encircled for seven days.
- Webster's Bible (WBS)
- By faith the walls of Jericho fell down after they had been encompassed seven days.
- Young's Literal Translation (YLT)
- by faith the walls of Jericho did fall, having been surrounded for seven days;
Read in context
- 28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- 29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- 30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
- 31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- 32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
Cross references
- Joshua 6:3–20 ಯೆಹೋಶುವ 6:3–20ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು. ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು. ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು. ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು. ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು. ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು. ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು. ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು. ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು. ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು. ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು. ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು. ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು