Hebrews · chapter 11 · verse 34
Hebrews 11:34 in Kannada
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
Benkiya balavanu aarisidaru; kattiya baayige tappisikondaru; nirbalaraagiddu balishtharaadaru; yuddhadalli paraakramashaaligalaadaru; parara dandugalannu odisibittaru.
Hebrews 11:34 in English
- King James Version (KJV)
- Quenched the violence of fire, escaped the edge of the sword, out of weakness were made strong, waxed valiant in fight, turned to flight the armies of the aliens.
- World English Bible (WEB)
- quenched the power of fire, escaped the edge of the sword, from weakness were made strong, grew mighty in war, and caused foreign armies to flee.
- American Standard Version (ASV)
- quenched the power of fire, escaped the edge of the sword, from weakness were made strong, waxed mighty in war, turned to flight armies of aliens.
- Bible in Basic English (BBE)
- Put out the power of fire, got safely away from the edge of the sword, were made strong when they had been feeble, became full of power in war, and put to flight the armies of the nations.
- Darby Translation (DBY)
- quenched [the] power of fire, escaped [the] edge of the sword, became strong out of weakness, became mighty in war, made [the] armies of strangers give way.
- Webster's Bible (WBS)
- Quenched the violence of fire, escaped the edge of the sword, out of weakness were made strong, became valiant in fight, turned to flight the armies of the aliens.
- Young's Literal Translation (YLT)
- quenched the power of fire, escaped the mouth of the sword, were made powerful out of infirmities, became strong in battle, caused to give way camps of the aliens.
Read in context
- 32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- 34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
- 36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
Cross references
- 1 Samuel 17:51–52 1 ಸಮುವೇಲನು 17:51–52ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು. ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
- 2 Kings 6:16–18 2 ಅರಸುಗಳು 6:16–18ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು. ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು. ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- 2 Chronicles 32:20–22 2 ಪೂರ್ವಕಾಲವೃತ್ತಾಂತ 32:20–22ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Judges 8:4–10 ನ್ಯಾಯಸ್ಥಾಪಕರು 8:4–10ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು. ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು. ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು. ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು. ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು. ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- Judges 7:19–25 ನ್ಯಾಯಸ್ಥಾಪಕರು 7:19–25ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು. ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು. ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು. ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- 2 Samuel 8:1–18 2 ಸಮುವೇಲನು 8:1–18ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು. ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು. ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು. ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು. ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು. ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು. ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು. ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು. ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು. ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು. ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು. ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Samuel 14:13–15 1 ಸಮುವೇಲನು 14:13–15ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು. ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
- 1 Kings 19:3 1 ಅರಸುಗಳು 19:3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- 2 Samuel 10:15–19 2 ಸಮುವೇಲನು 10:15–19ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು. ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು. ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
Original words (Greek)
- Quenched · G4570σβέννυμι sbénnymi
- violence · G1411δύναμις dýnamis
- fire · G4442πῦρ pŷr
- escaped · G5343φεύγω pheúgō
- edge · G4750στόμα stóma
- sword · G3162μάχαιρα máchaira
- of · G575ἀπό apó
- weakness · G769ἀσθένεια asthéneia
- strong · G1743ἐνδυναμόω endynamóō
- waxed · G1096γίνομαι gínomai
- valiant · G2478ἰσχυρός ischyrós
- in · G1722ἐν en
- fight · G4171πόλεμος pólemos
- flight · G2827κλίνω klínō
- armies · G3925παρεμβολή parembolḗ
- aliens · G245ἀλλότριος allótrios