Hebrews · chapter 13 · verse 1
Hebrews 13:1 in Kannada
ಸಹೋದರ ಪ್ರೀತಿಯು ನೆಲೆಯಾಗಿರಲಿ.
Sahodara preetiyu neleyaagirali.
Hebrews 13:1 in English
- King James Version (KJV)
- Let brotherly love continue.
- World English Bible (WEB)
- Let brotherly love continue.
- American Standard Version (ASV)
- Let love of the brethren continue.
- Bible in Basic English (BBE)
- Go on loving your brothers in the faith.
- Darby Translation (DBY)
- Let brotherly love abide.
- Webster's Bible (WBS)
- Let brotherly love continue.
- Young's Literal Translation (YLT)
- Let brotherly love remain;
Read in context
- 1ಸಹೋದರ ಪ್ರೀತಿಯು ನೆಲೆಯಾಗಿರಲಿ.
- 2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- 3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
Cross references
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- 2 Peter 1:7 2 ಪೇತ್ರನು 1:7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- Romans 12:9–10 ರೋಮಾಪುರದವರಿಗೆ 12:9–10ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 1 John 2:9–10 1 ಯೋಹಾನನು 2:9–10ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
- 2 John 1:5–6 2 ಯೋಹಾನನು 1:5–6ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Hebrews 6:10–11 ಇಬ್ರಿಯರಿಗೆ 6:10–11ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 1 John 3:10–18 1 ಯೋಹಾನನು 3:10–18ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ. ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.