Hebrews · chapter 13 · verse 24
Hebrews 13:24 in Kannada
ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Nimma sabhaanaayakarellarige mattu parishuddharellarige vandane. Itaalyadavaru nimmannu vandisuttaare.krupeyu nimmellarondige irali. Aamen.
Hebrews 13:24 in English
- King James Version (KJV)
- Salute all them that have the rule over you, and all the saints. They of Italy salute you.
- World English Bible (WEB)
- Greet all of your leaders and all the saints. The Italians greet you.
- American Standard Version (ASV)
- Salute all them that have the rule over you, and all the saints. They of Italy salute you.
- Bible in Basic English (BBE)
- Give words of love from me to those who are rulers over you, and to all the saints. Those who are in Italy send you their love.
- Darby Translation (DBY)
- Salute all your leaders, and all the saints. They from Italy salute you.
- Webster's Bible (WBS)
- Salute all them that have the rule over you, and all the saints. They of Italy salute you.
- Young's Literal Translation (YLT)
- Salute all those leading you, and all the saints; salute you doth those from Italy:
Read in context
- 22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- 23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
- 24ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Cross references
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- Philemon 1:5 ಫಿಲೆಮೋನನಿಗೆ 1:5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- Acts 18:2 ಅಪೊಸ್ತಲರ ಕೃತ್ಯಗಳು 18:2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- Philippians 4:22 ಫಿಲಿಪ್ಪಿಯವರಿಗೆ 4:22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- Romans 16:1–16 ರೋಮಾಪುರದವರಿಗೆ 16:1–16ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ. ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ. ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು. ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ. ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು. ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ. ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು. ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು. ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು. ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Romans 16:21–23 ರೋಮಾಪುರದವರಿಗೆ 16:21–23ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Colossians 1:2 ಕೊಲೊಸ್ಸೆಯವರಿಗೆ 1:2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 2 Corinthians 13:13 2 ಕೊರಿಂಥದವರಿಗೆ 13:13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.