Hebrews · chapter 13 · verse 4
Hebrews 13:4 in Kannada
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
Vivaahavu ellaadaralli gauravavaadaddoo haasigeyu nishkalankavaadaddoo aagide. Aadare jaararigoo vyabhichaarigaligoo devaru nyaayateerisuvanu.
Hebrews 13:4 in English
- King James Version (KJV)
- Marriage [is] honourable in all, and the bed undefiled: but whoremongers and adulterers God will judge.
- World English Bible (WEB)
- Let marriage be held in honor among all, and let the bed be undefiled; but God will judge the sexually immoral and adulterers.
- American Standard Version (ASV)
- [Let] marriage [be] had in honor among all, and [let] the bed [be] undefiled: for fornicators and adulterers God will judge.
- Bible in Basic English (BBE)
- Let married life be honoured among all of you and not made unclean; for men untrue in married life will be judged by God.
- Darby Translation (DBY)
- [Let] marriage [be held] every way in honour, and the bed [be] undefiled; for fornicators and adulterers will God judge.
- Webster's Bible (WBS)
- Marriage [is] honorable in all, and the bed undefiled: but lewd persons and adulterers God will judge.
- Young's Literal Translation (YLT)
- honourable [is] the marriage in all, and the bed undefiled, and whoremongers and adulterers God shall judge.
Read in context
- 2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- 3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
- 4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- 5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- 6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
Cross references
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Proverbs 5:15–23 ಜ್ಞಾನೋಕ್ತಿಗಳು 5:15–23ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ? ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ. ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 1 Corinthians 7:2–16 1 ಕೊರಿಂಥದವರಿಗೆ 7:2–16ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ. ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ. ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು. ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ. ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ. ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ. ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು; ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ. ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು. ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು. ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು. ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ. ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ. ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
- Galatians 5:19 ಗಲಾತ್ಯದವರಿಗೆ 5:19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
- Genesis 1:27–28 ಆದಿಕಾಂಡ 1:27–28ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು. ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Colossians 3:5–6 ಕೊಲೊಸ್ಸೆಯವರಿಗೆ 3:5–6ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- Genesis 2:21 ಆದಿಕಾಂಡ 2:21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
- 1 Timothy 3:12 1 ತಿಮೊಥೆಯನಿಗೆ 3:12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
Original words (Greek)
- Marriage · G1062γάμος gámos
- honourable · G5093τίμιος tímios
- in · G1722ἐν en
- all · G3956πᾶς pâs
- and · G2532καί kaí
- bed · G2845κοίτη koítē
- undefiled · G283ἀμίαντος amíantos
- but · G1161δέ dé
- whoremongers · G4205πόρνος pórnos
- and · G2532καί kaí
- adulterers · G3432μοιχός moichós
- God · G2316θεός theós
- judge · G2919κρίνω krínō