Hebrews · chapter 3 · verse 16
Hebrews 3:16 in Kannada
ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
Kelavaru aatanu nudidaddannu kelidaaga kopava nnebbisidaru; aadaagyoo mosheya moolaka aiguptadinda bandavarellaroo alla.
Hebrews 3:16 in English
- King James Version (KJV)
- For some, when they had heard, did provoke: howbeit not all that came out of Egypt by Moses.
- World English Bible (WEB)
- For who, when they heard, rebelled? Wasn’t it all those who came out of Egypt led by Moses?
- American Standard Version (ASV)
- For who, when they heard, did provoke? nay, did not all they that came out of Egypt by Moses?
- Bible in Basic English (BBE)
- Who made him angry when his voice came to them? was it not all those who came out of Egypt with Moses?
- Darby Translation (DBY)
- (for who was it, who, having heard, provoked? but [was it] not all who came out of Egypt by Moses?
- Webster's Bible (WBS)
- For some, when they had heard, did provoke: yet, not all that came out of Egypt by Moses.
- Young's Literal Translation (YLT)
- for certain having heard did provoke, but not all who did come out of Egypt through Moses;
Read in context
- 14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- 15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
- 16ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
- 17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- 18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Cross references
- Numbers 14:2 ಅರಣ್ಯಕಾಂಡ 14:2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
- Numbers 14:30 ಅರಣ್ಯಕಾಂಡ 14:30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Deuteronomy 1:38 ಧರ್ಮೋಪದೇಶಕಾಂಡ 1:38ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
- Psalm 78:17 ಕೀರ್ತನೆಗಳು 78:17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Numbers 14:4 ಅರಣ್ಯಕಾಂಡ 14:4ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- Numbers 14:38 ಅರಣ್ಯಕಾಂಡ 14:38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- Romans 11:4–5 ರೋಮಾಪುರದವರಿಗೆ 11:4–5ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- Deuteronomy 1:35–36 ಧರ್ಮೋಪದೇಶಕಾಂಡ 1:35–36ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
- Hebrews 3:9–10 ಇಬ್ರಿಯರಿಗೆ 3:9–10ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- Joshua 14:7–11 ಯೆಹೋಶುವ 14:7–11ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.