Hebrews · chapter 5 · verse 1
Hebrews 5:1 in Kannada
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
Pratiyobba mahaayaajakanu manushya rolaginda aarisalpattu manushyari goskara devara kaaryagaligaagi nemisalpadu ttaanallaa. Avanu kaanikegalannoo yajnyagalannoo paapagaligoskara samarpisabeku.
Hebrews 5:1 in English
- King James Version (KJV)
- For every high priest taken from among men is ordained for men in things [pertaining] to God, that he may offer both gifts and sacrifices for sins:
- World English Bible (WEB)
- For every high priest, being taken from among men, is appointed for men in things pertaining to God, that he may offer both gifts and sacrifices for sins.
- American Standard Version (ASV)
- For every high priest, being taken from among men, is appointed for men in things pertaining to God, that he may offer both gifts and sacrifices for sins:
- Bible in Basic English (BBE)
- Every high priest who is taken from among men is given his position to take care of the interests of men in those things which have to do with God, so that he may make offerings for sins.
- Darby Translation (DBY)
- For every high priest taken from amongst men is established for men in things relating to God, that he may offer both gifts and sacrifices for sins;
- Webster's Bible (WBS)
- For every high priest taken from among men, is ordained for men in things [pertaining] to God, that he may offer both gifts and sacrifices for sins:
- Young's Literal Translation (YLT)
- For every chief priest — out of men taken — in behalf of men is set in things [pertaining] to God, that he may offer both gifts and sacrifices for sins,
Read in context
- 1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- 2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- 3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
Cross references
- Hebrews 8:3 ಇಬ್ರಿಯರಿಗೆ 8:3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
- Hebrews 10:11 ಇಬ್ರಿಯರಿಗೆ 10:11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Leviticus 9:15–21 ಯಾಜಕಕಾಂಡ 9:15–21ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು. ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು. ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು. ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು. ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- Exodus 29:1–37 ವಿಮೋಚನಕಾಂಡ 29:1–37ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು. ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು. ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು. ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು. ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು. ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು. ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ. ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು. ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು. ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ. ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು. ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು. ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು. ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ. ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು. ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು. ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು. ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು. ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು. ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು. ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು. ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Leviticus 8:2 ಯಾಜಕಕಾಂಡ 8:2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
- Leviticus 9:7 ಯಾಜಕಕಾಂಡ 9:7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
- Numbers 18:1–3 ಅರಣ್ಯಕಾಂಡ 18:1–3ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು. ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- Exodus 28:1–14 ವಿಮೋಚನಕಾಂಡ 28:1–14ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು. ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು. ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು. ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು. ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. ನೀನು ಬಂಗಾರದ ಜವೆಗಳನ್ನು ಮಾಡಬೇಕು. ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
Original words (Greek)
- For · G1063γάρ gár
- every · G3956πᾶς pâs
- priest · G749ἀρχιερεύς archiereús
- taken · G2983λαμβάνω lambánō
- among · G1537ἐκ ek
- men · G444ἄνθρωπος ánthrōpos
- ordained · G2525καθίστημι kathístēmi
- for · G5228ὑπέρ hypér
- men · G444ἄνθρωπος ánthrōpos
- in · G2525καθίστημι kathístēmi
- things · G3588ὁ ho
- to · G4314πρός prós
- God · G2316θεός theós
- that · G2443ἵνα hína
- offer · G4374προσφέρω prosphérō
- both · G5037τέ té
- gifts · G1435δῶρον dōron
- and · G2532καί kaí
- sacrifices · G2378θυσία thysía
- for · G5228ὑπέρ hypér
- sins · G266ἁμαρτία hamartía