Hebrews · chapter 5 · verse 3
Hebrews 5:3 in Kannada
ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
Aa balaheenateya kaaranadinda avanu janarigoskara hego haageye tanagoskaravoo paapagaligaagi arpisabekaadava naagiddaane.
Hebrews 5:3 in English
- King James Version (KJV)
- And by reason hereof he ought, as for the people, so also for himself, to offer for sins.
- World English Bible (WEB)
- Because of this, he must offer sacrifices for sins for the people, as well as for himself.
- American Standard Version (ASV)
- and by reason thereof is bound, as for the people, so also for himself, to offer for sins.
- Bible in Basic English (BBE)
- And being feeble, he has to make sin-offerings for himself as well as for the people.
- Darby Translation (DBY)
- and, on account of this [infirmity], he ought, even as for the people, so also for himself, to offer for sins.
- Webster's Bible (WBS)
- And by reason of this he ought, as for the people, so also for himself, to offer for sins.
- Young's Literal Translation (YLT)
- and because of this infirmity he ought, as for the people, so also for himself to offer for sins;
Read in context
- 1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- 2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- 3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- 4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
- 5ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
Cross references
- Leviticus 16:6 ಯಾಜಕಕಾಂಡ 16:6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- Leviticus 9:7 ಯಾಜಕಕಾಂಡ 9:7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Leviticus 4:3–12 ಯಾಜಕಕಾಂಡ 4:3–12ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು. ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು. ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು. ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Leviticus 16:15 ಯಾಜಕಕಾಂಡ 16:15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
- Leviticus 8:14–21 ಯಾಜಕಕಾಂಡ 8:14–21ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು. ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು. ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- Exodus 29:12–19 ವಿಮೋಚನಕಾಂಡ 29:12–19ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು. ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ. ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು. ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು. ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ. ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Original words (Greek)
- And · G2532καί kaí
- reason · G1223διά diá
- here · G3778οὗτος hoûtos
- of · G1223διά diá
- ought · G3784ὀφείλω opheílō
- as · G2531καθώς kathṓs
- for · G4012περί perí
- people · G2992λαός laós
- so · G3779οὕτω hoútō
- also · G2532καί kaí
- for · G4012περί perí
- himself · G1438ἑαυτοῦ heautoû
- offer · G4374προσφέρω prosphérō
- for · G5228ὑπέρ hypér
- sins · G266ἁμαρτία hamartía