Hebrews · chapter 5 · verse 7
Hebrews 5:7 in Kannada
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
Aatanu tanna shareerada dinagalalli maranadinda tappisalu shaktanaagiruvaatanige bala vaagi kooguttaa kanneerannu surisuttaa praarthane vijnyaapanegalannu samarpisi bhayapattaddaralli kelalpa ttanu.
Hebrews 5:7 in English
- King James Version (KJV)
- Who in the days of his flesh, when he had offered up prayers and supplications with strong crying and tears unto him that was able to save him from death, and was heard in that he feared;
- World English Bible (WEB)
- He, in the days of his flesh, having offered up prayers and petitions with strong crying and tears to him who was able to save him from death, and having been heard for his godly fear,
- American Standard Version (ASV)
- Who in the days of his flesh, having offered up prayers and supplications with strong crying and tears unto him that was able to save him from death, and having been heard for his godly fear,
- Bible in Basic English (BBE)
- Who in the days of his flesh, having sent up prayers and requests with strong crying and weeping to him who was able to give him salvation from death, had his prayer answered because of his fear of God.
- Darby Translation (DBY)
- Who in the days of his flesh, having offered up both supplications and entreaties to him who was able to save him out of death, with strong crying and tears; (and having been heard because of his piety;)
- Webster's Bible (WBS)
- Who in the days of his flesh, when he had offered up prayers and supplications with strong crying and tears to him that was able to save him from death, and was heard, in that he feared;
- Young's Literal Translation (YLT)
- who in the days of his flesh both prayers and supplications unto Him who was able to save him from death — with strong crying and tears — having offered up, and having been heard in respect to that which he feared,
Read in context
- 5ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
- 6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- 7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- 8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- 9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
Cross references
- Luke 22:41–44 ಲೂಕನು 22:41–44ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Matthew 27:46 ಮತ್ತಾಯನು 27:46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Mark 14:32–39 ಮಾರ್ಕನು 14:32–39ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು. ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು. ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು. ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- John 17:4–5 ಯೋಹಾನನು 17:4–5ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- John 12:27–28 ಯೋಹಾನನು 12:27–28ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- Mark 15:34 ಮಾರ್ಕನು 15:34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- Matthew 26:28–44 ಮತ್ತಾಯನು 26:28–44ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು. ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು. ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು. ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ; ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು. ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು. ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು. ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು. ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
- Matthew 27:50 ಮತ್ತಾಯನು 27:50ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- John 11:35 ಯೋಹಾನನು 11:35ಯೇಸು ಅತ್ತನು.
- Psalm 22:1–21 ಕೀರ್ತನೆಗಳು 22:1–21ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
Original words (Greek)
- Who · G3739ὅς hós
- in · G1722ἐν en
- days · G2250ἡμέρα hēméra
- of · G4561σάρξ sárx
- his · G846αὐτός autós
- flesh · G4561σάρξ sárx
- up · G4374προσφέρω prosphérō
- prayers · G1162δέησις déēsis
- and · G2532καί kaí
- supplications · G2428ἱκετηρία hiketēría
- with · G3326μετά metá
- strong · G2478ἰσχυρός ischyrós
- crying · G2906κραυγή kraugḗ
- and · G2532καί kaí
- tears · G1144δάκρυ dákry
- unto · G4314πρός prós
- able · G1410δύναμαι dýnamai
- save · G4982σώζω sṓzō
- him · G846αὐτός autós
- from · G1537ἐκ ek
- death · G2288θάνατος thánatos
- and · G2532καί kaí
- heard · G1522εἰσακούω eisakoúō
- in · G575ἀπό apó
- feared · G2124εὐλάβεια eulábeia