Hebrews · chapter 6 · verse 15
Hebrews 6:15 in Kannada
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
Heege avanu taalmeyinda kaadiddu vaagdaanavannu hondidanu.
Hebrews 6:15 in English
- King James Version (KJV)
- And so, after he had patiently endured, he obtained the promise.
- World English Bible (WEB)
- Thus, having patiently endured, he obtained the promise.
- American Standard Version (ASV)
- And thus, having patiently endured, he obtained the promise.
- Bible in Basic English (BBE)
- And so, when he had been waiting calmly for a long time, God's word to him was put into effect.
- Darby Translation (DBY)
- and thus, having had long patience, he got the promise.
- Webster's Bible (WBS)
- And so, after he had patiently endured, he obtained the promise.
- Young's Literal Translation (YLT)
- and so, having patiently endured, he did obtain the promise;
Read in context
- 13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- 14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
- 15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
- 16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- 17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
Cross references
- Genesis 12:2–3 ಆದಿಕಾಂಡ 12:2–3ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Romans 4:17–25 ರೋಮಾಪುರದವರಿಗೆ 4:17–25(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Genesis 15:2–6 ಆದಿಕಾಂಡ 15:2–6ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು. ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು. ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Genesis 21:2–7 ಆದಿಕಾಂಡ 21:2–7ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು. ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ-- ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- Genesis 17:16–17 ಆದಿಕಾಂಡ 17:16–17ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು. ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- Exodus 1:7 ವಿಮೋಚನಕಾಂಡ 1:7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
- Habakkuk 2:2–3 ಹಬಕ್ಕೂಕ 2:2–3ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.