Hebrews · chapter 7 · verse 22
Hebrews 7:22 in Kannada
ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
Idarindale yesu eshto shreshthavaada odambadikege honegaaranaadanu.
Hebrews 7:22 in English
- King James Version (KJV)
- By so much was Jesus made a surety of a better testament.
- World English Bible (WEB)
- By so much, Jesus has become the guarantee of a better covenant.
- American Standard Version (ASV)
- by so much also hath Jesus become the surety of a better covenant.
- Bible in Basic English (BBE)
- By so much is it a better agreement which we have through Jesus.
- Darby Translation (DBY)
- by so much Jesus became surety of a better covenant.
- Webster's Bible (WBS)
- By so much was Jesus made a surety of a better testament.
- Young's Literal Translation (YLT)
- by so much of a better covenant hath Jesus become surety,
Read in context
- 20ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
- 21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- 22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- 23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
- 24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
Cross references
- 1 Corinthians 11:25 1 ಕೊರಿಂಥದವರಿಗೆ 11:25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- Hebrews 8:6–12 ಇಬ್ರಿಯರಿಗೆ 8:6–12ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Genesis 44:32 ಆದಿಕಾಂಡ 44:32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
- Hebrews 9:15–23 ಇಬ್ರಿಯರಿಗೆ 9:15–23ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ. ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Luke 22:20 ಲೂಕನು 22:20ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Genesis 43:9 ಆದಿಕಾಂಡ 43:9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Mark 14:24 ಮಾರ್ಕನು 14:24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Proverbs 6:1 ಜ್ಞಾನೋಕ್ತಿಗಳು 6:1ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ