Hebrews · chapter 9 · verse 2
Hebrews 9:2 in Kannada
ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
Andare ondu gudaaravu kattalpa ttitu. Adara modalaneya bhaagadalli deepastambha, meju, sammukhada rotti ivugaliddavu; adakke pavitra sthala endu hesaru.
Hebrews 9:2 in English
- King James Version (KJV)
- For there was a tabernacle made; the first, wherein [was] the candlestick, and the table, and the shewbread; which is called the sanctuary.
- World English Bible (WEB)
- For a tabernacle was prepared. In the first part were the lamp stand, the table, and the show bread, which is called the Holy Place.
- American Standard Version (ASV)
- For there was a tabernacle prepared, the first, wherein [were] the candlestick, and the table, and the showbread; which is called the Holy place.
- Bible in Basic English (BBE)
- For the first Tent was made ready, having in it the vessels for the lights and the table and the ordering of the bread; and this is named the holy place.
- Darby Translation (DBY)
- For a tabernacle was set up; the first, in which [were] both the candlestick and the table and the exposition of the loaves, which is called Holy;
- Webster's Bible (WBS)
- For there was a tabernacle made; the first, in which [was] the candlestick, and the table, and the show-bread; which is called the sanctuary.
- Young's Literal Translation (YLT)
- for a tabernacle was prepared, the first, in which was both the lamp-stand, and the table, and the bread of the presence — which is called 'Holy;'
Read in context
- 1ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
- 2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- 3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- 4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
Cross references
- Exodus 40:4 ವಿಮೋಚನಕಾಂಡ 40:4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
- Leviticus 24:5–8 ಯಾಜಕಕಾಂಡ 24:5–8ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
- Exodus 26:35 ವಿಮೋಚನಕಾಂಡ 26:35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
- Exodus 40:22–24 ವಿಮೋಚನಕಾಂಡ 40:22–24ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು. ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು. ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
- Exodus 26:33 ವಿಮೋಚನಕಾಂಡ 26:33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Exodus 40:18–20 ವಿಮೋಚನಕಾಂಡ 40:18–20ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು. ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- Exodus 29:35 ವಿಮೋಚನಕಾಂಡ 29:35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- Exodus 39:32–34 ವಿಮೋಚನಕಾಂಡ 39:32–34ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು. ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು; ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
- Exodus 25:8–9 ವಿಮೋಚನಕಾಂಡ 25:8–9ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು. ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- Exodus 29:1 ವಿಮೋಚನಕಾಂಡ 29:1ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Exodus 39:36–38 ವಿಮೋಚನಕಾಂಡ 39:36–38ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು; ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು; ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
- Exodus 36:8–38 ವಿಮೋಚನಕಾಂಡ 36:8–38ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು. ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು. ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು. ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು. ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು. ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು. ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು. ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು. ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು. ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು. ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು. ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು. ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು. ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು. ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು. ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು. ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು. ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು. ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು. ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು. ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು. ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು. ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು. ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು. ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು. ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು. ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು. ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
Original words (Greek)
- For · G1063γάρ gár
- was · G2680κατασκευάζω kataskeuázō
- tabernacle · G4633σκηνή skēnḗ
- made · G2680κατασκευάζω kataskeuázō
- first · G4413πρῶτος prōtos
- where · G3739ὅς hós
- in · G1722ἐν en
- candlestick · G3087λυχνία lychnía
- and · G2532καί kaí
- table · G5132τράπεζα trápeza
- and · G2532καί kaí
- shewbread · G4286πρόθεσις próthesis
- which · G3748ὅστις hóstis
- called · G3004λέγω légō
- sanctuary · G39ἅγιον hágion