Hebrews · chapter 9 · verse 21
Hebrews 9:21 in Kannada
ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
Idallade gudaarada meleyoo sevege bekaagiruva ellaa upa karanagala meleyoo raktavannu prokshisidanu.
Hebrews 9:21 in English
- King James Version (KJV)
- Moreover he sprinkled with blood both the tabernacle, and all the vessels of the ministry.
- World English Bible (WEB)
- He sprinkled the tabernacle and all the vessels of the ministry in the same way with the blood.
- American Standard Version (ASV)
- Moreover the tabernacle and all the vessels of the ministry he sprinkled in like manner with the blood.
- Bible in Basic English (BBE)
- And the blood was put on the Tent and all the holy vessels in the same way.
- Darby Translation (DBY)
- And the tabernacle too and all the vessels of service he sprinkled in like manner with blood;
- Webster's Bible (WBS)
- Moreover, he sprinkled likewise with blood both the tabernacle, and all the vessels of the ministry.
- Young's Literal Translation (YLT)
- and both the tabernacle and all the vessels of the service with blood in like manner he did sprinkle,
Read in context
- 19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- 20ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
- 21ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
- 22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- 23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
Cross references
- Leviticus 8:19 ಯಾಜಕಕಾಂಡ 8:19ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- Exodus 29:36 ವಿಮೋಚನಕಾಂಡ 29:36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
- Exodus 29:12 ವಿಮೋಚನಕಾಂಡ 29:12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
- Leviticus 9:18 ಯಾಜಕಕಾಂಡ 9:18ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
- Ezekiel 43:18–26 ಯೆಹೆಜ್ಕೇಲನು 43:18–26ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ. ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು. ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು. ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು. ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು. ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು. ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು. ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Leviticus 16:14–19 ಯಾಜಕಕಾಂಡ 16:14–19ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Leviticus 9:8–9 ಯಾಜಕಕಾಂಡ 9:8–9ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು. ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
- Exodus 29:20 ವಿಮೋಚನಕಾಂಡ 29:20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- 2 Chronicles 29:19–22 2 ಪೂರ್ವಕಾಲವೃತ್ತಾಂತ 29:19–22ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು. ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು. ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು. ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.