Hosea 1:10 in Kannada
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Aadaagyoo israayelina makkala sankhye aleyaloo lekkisaloo aagada samudrada maralina haage iruvadu; munde idaada mele--nanna janarallavendu avarige helida sthaladalliye jeevavulla devara kumaararendu avarige heluvaru.aaga yehoodada makkalu mattu israayelina makkalu ottugoodikondu tamage obbananne shirassannaagi nemakamaadikolluvaru; deshadolaginda horage baruvaru, yaakandare ijrelina sudinavu ati visheshavaagiruvadu andanu.
Hosea 1:10 in English
- King James Version (KJV)
- Yet the number of the children of Israel shall be as the sand of the sea, which cannot be measured nor numbered; and it shall come to pass, [that] in the place where it was said unto them, Ye [are] not my people, [there] it shall be said unto them, [Ye are] the sons of the living God.
- World English Bible (WEB)
- Yet the number of the children of Israel will be as the sand of the sea, which can’t be measured or counted; and it will come to pass that, in the place where it was said to them, ‘You are not my people,’ they will be called ‘sons of the living God.’
- American Standard Version (ASV)
- Yet the number of the children of Israel shall be as the sand of the sea, which cannot be measured nor numbered; and it shall come to pass that, in the place where it was said unto them, Ye are not my people, it shall be said unto them, [Ye are] the sons of the living God.
- Bible in Basic English (BBE)
- But still the number of the children of Israel will be like the sand of the sea, which may not be measured or numbered; and in place of its being said to them, You are not my people, it will be said to them, You are the sons of the living God
- Darby Translation (DBY)
- Yet the number of the children of Israel shall be as the sand of the sea which cannot be measured or numbered; and it shall come to pass, [that] in the place where it was said unto them, Ye are not my people, it shall be said unto them, Sons of the living God.
- Webster's Bible (WBS)
- Yet the number of the children of Israel shall be as the sand of the sea, which cannot be measured nor numbered; and it shall come to pass, [that] in the place where it was said to them, Ye [are] not my people, [there] it shall be said to them, [Ye are] the sons of the living God.
- Young's Literal Translation (YLT)
- and the number of the sons of Israel hath been as the sand of the sea, that is not measured nor numbered, and it hath come to pass in the place where it is said to them, Ye [are] not My people, it is said to them, Sons of the Living God;
Read in context
- 8ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
- 9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- 10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- 11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Cross references
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Galatians 4:6–7 ಗಲಾತ್ಯದವರಿಗೆ 4:6–7ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Romans 9:25–28 ರೋಮಾಪುರದವರಿಗೆ 9:25–28ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ. ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು. ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ. ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Romans 8:14–17 ರೋಮಾಪುರದವರಿಗೆ 8:14–17ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Isaiah 60:4–22 ಯೆಶಾಯ 60:4–22ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು. ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು. ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
Original words (Hebrew)
- number · H4557מִסְפָּר miçpâr
- children · H1121בֵּן bên
- Israel · H3478יִשְׂרָאֵל Yisrâʼêl
- sand · H2344חוֹל chôwl
- sea · H3220יָם yâm
- measured · H4058מָדַד mâdad
- numbered · H5608סָפַר çâphar
- place · H4725מָקוֹם mâqôwm
- said · H559אָמַר ʼâmar
- people · H5971עַם ʻam
- said · H559אָמַר ʼâmar
- sons · H1121בֵּן bên
- living · H2416חַי chay
- God · H410אֵל ʼêl