Hosea · chapter 1 · verse 2
Hosea 1:2 in Kannada
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
Hosheyanindaada kartana vaakyada praaram bhavu: kartanu hosheyanige heliddenandare --hogi ninage vyabhichaarinigala hendatiyannoo vyabhichaarinigala makkalannoo tegeduko; deshavu kartanannu bittu dodda vyabhichaaratanavannu maadikondide.
Hosea 1:2 in English
- King James Version (KJV)
- The beginning of the word of the LORD by Hosea. And the LORD said to Hosea, Go, take unto thee a wife of whoredoms and children of whoredoms: for the land hath committed great whoredom, [departing] from the LORD.
- World English Bible (WEB)
- When the LORD spoke at first by Hosea, the LORD said to Hosea, “Go, take for yourself a wife of prostitution and children of unfaithfulness; for the land commits great adultery, forsaking the LORD.”
- American Standard Version (ASV)
- When Jehovah spake at the first by Hosea, Jehovah said unto Hosea, Go, take unto thee a wife of whoredom and children of whoredom; for the land doth commit great whoredom, [departing] from Jehovah.
- Bible in Basic English (BBE)
- The start of the word of the Lord by Hosea: And the Lord said to Hosea, Go, take for yourself a wife of loose ways, and children of the same, for the land has been untrue to the Lord.
- Darby Translation (DBY)
- The beginning of the word of Jehovah through Hosea. And Jehovah said to Hosea, Go, take unto thee a wife of whoredoms, and children of whoredoms; for the land is entirely given up to whoredom, away from Jehovah.
- Webster's Bible (WBS)
- The beginning of the word of the LORD by Hosea. And the LORD said to Hosea, Go take to thee a wife addicted to lewdness and children of lewdness; for the land hath committed great lewdness, [departing] from the LORD.
- Young's Literal Translation (YLT)
- The commencement of Jehovah's speaking by Hosea. And Jehovah saith unto Hosea, 'Go, take to thee a woman of whoredoms, and children of whoredoms, for utterly go a-whoring doth the land from after Jehovah.'
Read in context
- 1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
- 2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
- 3ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
- 4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
Cross references
- Hosea 2:4–5 ಹೋಶೇಯ 2:4–5ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ, ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Hosea 3:1 ಹೋಶೇಯ 3:1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- Psalm 106:39 ಕೀರ್ತನೆಗಳು 106:39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- 2 Peter 2:14 2 ಪೇತ್ರನು 2:14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Jeremiah 3:9 ಯೆರೆಮೀಯ 3:9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- Exodus 34:15–16 ವಿಮೋಚನಕಾಂಡ 34:15–16ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Ezekiel 23:1–49 ಯೆಹೆಜ್ಕೇಲನು 23:1–49ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು. ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು; ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು. ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ. ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು. ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ. ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು. ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು. ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ; ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ. ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು. ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ? ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ. ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Revelation 17:1–2 ಪ್ರಕಟನೆ 17:1–2ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Revelation 17:5 ಪ್ರಕಟನೆ 17:5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Ezekiel 16:1–63 ಯೆಹೆಜ್ಕೇಲನು 16:1–63ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು. ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ. ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು. ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ; ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ. ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;) ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ; ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ! ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ. ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ. ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು. ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು. ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ. ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- beginning · H8462תְּחִלָּה tᵉchillâh
- word · H1696דָבַר dâbar
- Hosea · H1954הוֹשֵׁעַ Hôwshêaʻ
- said · H559אָמַר ʼâmar
- Hosea · H1954הוֹשֵׁעַ Hôwshêaʻ
- Go · H3212יָלַךְ yâlak
- take · H3947לָקַח lâqach
- wife · H802אִשָּׁה ʼishshâh
- whoredoms · H2183זָנוּן zânûwn
- children · H3206יֶלֶד yeled
- whoredoms · H2183זָנוּן zânûwn
- land · H776אֶרֶץ ʼerets
- great · H2181זָנָה zânâh
- whoredom · H2181זָנָה zânâh
- from · H310אַחַר ʼachar